ನವದೆಹಲಿ,ಮೇ 4- ಪಶ್ಚಿಮ ಬಂಗಾಳದಲ್ಲಿ ದೀದಿ ಕೋಟೆ ಕೆಡವಿದ ಕಮಲ, ತಮಿಳು ನಾಡಿನಲ್ಲಿ ಸುನಾಮಿ ಎಬ್ಬಿಸಿದ ವಿಜಯ್, ಅಸ್ಸಾಂನಲ್ಲಿ ಹ್ಯಾಟ್ರಿಕ್‌ನತ್ತ ಬಿಜೆಪಿ, ಕೇರಳದಲ್ಲಿ ಯುಡಿಎ್ ಹಾಗೂ ಪುದುಚೇರಿಯಲ್ಲಿ ಮತ್ತೆ ಎನ್‌ಡಿಎ ಮತ್ತೆ ಅಧಿಕಾರಕ್ಕೆ.
ಇಡೀ ದೇಶದ ಗಮನ ಸೆಳೆದಿದ್ದ ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಲಿತಾಂಶ ಹೊರಬಿದ್ದಿದ್ದು, 3 ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರದತ್ತ ದಾಪುಗಾಲು ಇಟ್ಟಿದೆ.
ಪ.ಬಂಗಾಳದ 294 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ-180, ಟಿಎಂಸಿ-110 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕಮಲ ಅರಳಿದ್ದು ಇತಿಹಾಸ ಸೃಷ್ಟಿಸಿದೆ. ಎಸ್‌ಐಆರ್ ನಡೆದ ನಂತರ ಮೊದಲ ಚುನಾವಣೆ ಇದಾಗಿದ್ದು, ಶತಾಯಗತಾಯ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯನ್ನು ಮಣಿಸಲೇಬೇಕೆಂದು ಪಣ ತೊಟ್ಟಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಸಚಿವ ಅಮಿತ್ ಶಾ ಅವರ ರಾಜಕೀಯ ಕಾರ್ಯತಂತ್ರ ಲಕೊಟ್ಟಿದೆ.
ಎಲ್ಲಾ ರಾಜಕೀಯ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿರುವ ದ್ರಾವಿಡರ ನಾಡು ತಮಿಳುನಾಡಿನಲ್ಲಿ ಖ್ಯಾತ ನಟ ವಿಜಯ್ ನೇತೃತ್ವದ ಟಿವಿಕೆ ಸ್ವಂತ ಬಲದ ಮೇಲೆ ಅಧಿಕಾರ ಗದ್ದುಗೆ ಹಿಡಿಯುವತ್ತ ಮುನ್ನಡೆದಿದೆ.
ವಿಜಯ್ ನೇತೃತ್ವದ ಟಿವಿಕೆ-113, ಎಐಎಡಿಎಂಕೆ-73, ಡಿಎಂಕೆ-48 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.ಸ್ಟಾಲಿನ್ ಸಂಪುಟದ ಸುಮಾರು 20ಕ್ಕೂ ಹೆಚ್ಚು ಸಚಿವರು ಸೋಲಿನ ರುಚಿ ಕಂಡಿದ್ದಾರೆ. ಸ್ವತಃ ಉಪಮುಖ್ಯಮಂತ್ರಿ ಉದಯ್ ನಿಧಿ ಸ್ಟಾಲಿನ್ ತಮ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ.
ರಾಜ್ಯದಲ್ಲಿ ಈ ಬಾರಿ ಅಧಿಕಾರ ಹಿಡಿದೇ ತೀರುತ್ತೇವೆ ಎಂಬ ನಿರೀಕ್ಷೆಯಲ್ಲಿದ್ದ ಮುಖ್ಯಮಂತ್ರಿ ಸ್ಟಾಲಿನ್ ನೇತೃತ್ವದ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ ಟಿವಿಕೆ ಅಲೆ ಮುಂದೆ ಧೂಳೀಪಟವಾಗಿದೆ.ತಮಿಳುನಾಡಿನಲ್ಲಿ ಈ ಬಾರಿ ಟಿವಿಕೆ-ಎಐಎಡಿಎಂಕೆ ಮೈತ್ರಿಕೂಟ ಸರ್ಕಾರ ರಚಿಸುವ ಸಾಧ್ಯತೆಯಿದೆ. ಇದಕ್ಕೆ ಪುಷ್ಟಿ ನೀಡುವಂತೆ ಈಗಾಗಲೇ ಎರಡೂ ಪಕ್ಷಗಳ ಮುಖಂಡರ ನಡುವೆ ಮಾತುಕತೆ ಆರಂಭವಾಗಿದೆ.
ಇತ್ತೀಚಿನ ದಶಕಗಳಲ್ಲಿ ಚಲನಚಿತ್ರ ನಟನೊಬ್ಬ ಅಲ್ಪಕಾಲದಲ್ಲಿ ರಾಜಕೀಯ ಪಕ್ಷ ಸ್ಥಾಪನೆ ಮಾಡಿ ಅಧಿಕಾರ ಹಿಡಿದಿರುವ ಅಪರೂಪದ ನಿದರ್ಶನಕ್ಕೆ ತಮಿಳುನಾಡು ಸಾಕ್ಷಿಯಾಗಿದೆ.ಪ್ರಾರಂಭದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಡಿಎಂಕೆ ಕಾರ್ಯಕರ್ತರು ಚನ್ನೈನಲ್ಲಿರುವ ಪಕ್ಷದ ಕಚೇರಿ ಮುಂದೆ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ನಂತರ ಇದ್ದಕ್ಕಿದ್ದಂತೆ ಟಿವಿಕೆ ಎರಡು ಪಕ್ಷಗಳನ್ನು ಹಿಂದಿಕ್ಕಿ ಮುನ್ನಡೆ ಸಾಧಿಸುತ್ತಿದ್ದಂತೆ ಡಿಎಂಕೆ ಕಚೇರಿಯಲ್ಲಿ ಜಮಾಯಿಸಿದ್ದ ಕಾರ್ಯಕರ್ತರು ಒಬ್ಬೊಬ್ಬರಾಗಿಯೇ ಜಾಗ ಖಾಲಿ ಮಾಡಿದರು.
ಇತ್ತ ವಿಜಯ್ ಅವರ ಕಚೇರಿ ಮುಂದೆ ಅಭಿಮಾನಿಗಳು 10 ಗಂಟೆಯ ನಂತರ ಪಟಾಕಿ ಸಿಡಿಸಿ, ಸಿಹಿ ಹಂಚಿ, ಕುಣಿದು ಕುಪ್ಪಳಿಸಿದರು.ದೇವರನಾಡು ಕೇರಳಂನಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎ್ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ. ರಾಜ್ಯದ ಒಟ್ಟು 140 ವಿಧಾನಸಭಾ ಕ್ಷೇತ್ರಗಳಲ್ಲಿ ಯುಡಿಎ್-85, ಎಲ್‌ಡಿಎಫ್-41, ಬಿಜೆಪಿ-2 ಹಾಗೂ ಇತರರು- 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಸತತ 2 ಬಾರಿ ಅಧಿಕಾರ ಹಿಡಿದಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನೇತೃತ್ವದ ಎಲ್‌ಡಿಎಫ್ ಹ್ಯಾಟ್ರಿಕ್ ಕನಸು ಭಗ್ನಗೊಂಡಿದೆ.ಅಸ್ಸಾಂನಲ್ಲಿ ಬಿಜೆಪಿ ಶತಕದತ್ತ ದಾಪುಗಾಲು ಇಟ್ಟಿದೆ. ರಾಜ್ಯದ ಒಟ್ಟು 126 ಕ್ಷೇತ್ರಗಳ ಪೈಕಿ ಬಿಜೆಪಿ ನೇತೃತ್ವದ ಎನ್‌ಡಿಎ-98, ಕಾಂಗ್ರೆಸ್-26 ಹಾಗೂ ಇತರರು-2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಪುನಃ ಬಿಜೆಪಿ-ಎಐಎನ್‌ಆರ್‌ಸಿ ನೇತೃತ್ವದ ಮೈತ್ರಿಕೂಟ ಎರಡನೇ ಬಾರಿಗೆ ಅಧಿಕಾರ ಹಿಡಿದಿದೆ.ರಾಜ್ಯದ ಒಟ್ಟು 30 ವಿಧಾನಸಭಾ ಕ್ಷೇತ್ರಗಳ ಪೈಕಿ ಎನ್‌ಡಿಎ ಮೈತ್ರಿಕೂಟ-18, ಕಾಂಗ್ರೆಸ್-3 ಹಾಗೂ ಇತರರು-5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
