Homeರಾಷ್ಟ್ರೀಯಪಶ್ಚಿಮ ಬಂಗಾಳ : ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್‌ ರೈಲಿನ ಬೋಗಿಗೆ ಬೆಂಕಿ

ಪಶ್ಚಿಮ ಬಂಗಾಳ : ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್‌ ರೈಲಿನ ಬೋಗಿಗೆ ಬೆಂಕಿ

Bengal: Coach of empty passenger train catches fire, none injured

ಕೋಲ್ಕತ್ತಾ, ಫೆ.15- ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್‌ ಜಿಲ್ಲೆಯ ಕಟ್ವಾ ರೈಲು ನಿಲ್ದಾಣದಲ್ಲಿ ಇಂದು ಮುಂಜಾನೆ ಖಾಲಿ ಪ್ಯಾಸೆಂಜರ್‌ ರೈಲಿನ ಬೋಗಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೂರ್ವ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಮುಂಜಾನೆ ಬೆಳಿಗ್ಗೆ 4.30 ರ ಸುಮಾರಿಗೆ ಪ್ಲಾಟ್‌ಫಾರ್ಮ್‌ ಸಂಖ್ಯೆ ಎರಡರಲ್ಲಿ ನಿಂತಿದ್ದ ಕಟ್ವಾ-ಅಜೀಮ್‌ಗಂಜ್‌‍ ಪ್ಯಾಸೆಂಜರ್‌ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೆ ಕಾರ್ಯಪ್ರವೃತ್ತರಾಗಿ ಸತತ 30 ನಿಮಿಷಗಳ ಕಾರ್ಯಾಚರಣೆ ನಂತರ ಬೆಂಕಿಯನ್ನುನಿಯಂತ್ರಣಕ್ಕೆ ತಂದಿದ್ದಾರೆ. ನಿಲ್ದಾಣದಲ್ಲಿದ್ದ ಪ್ರಯಾಣಿಕರು ಕೋಚ್‌ಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದರು, ಇದರಿಂದಾಗಿ ಪ್ಲಾಟ್‌ಫಾರ್ಮ್‌ನಲ್ಲಿ ಸ್ವಲ್ಪ ಗದ್ದಲ ಉಂಟಾಯಿತು ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ಹರಡದಂತೆ ತಡೆಯಲು ರೈಲ್ವೆ ಸಿಬ್ಬಂದಿ ತಕ್ಷಣ ಬೋಗಿಗಳನ್ನು ಬೇರ್ಪಡಿಸಿದರು ಎಂದು ಪೂರ್ವ ರೈಲ್ವೆ ಅಧಿಕಾರಿ ತಿಳಿಸಿದ್ದಾರೆ.ಬೆಂಕಿ ಹೊತ್ತಿಕೊಳ್ಳಲು ಕಾರಣ ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

RELATED ARTICLES

Latest News