Friday, April 17, 2026
Homeರಾಷ್ಟ್ರೀಯಬೆಂಗಳೂರು : ನೇಣು ಬಿಗಿದುಕೊಂಡು ಬಿಕಾಂ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು : ನೇಣು ಬಿಗಿದುಕೊಂಡು ಬಿಕಾಂ ವಿದ್ಯಾರ್ಥಿ ಆತ್ಮಹತ್ಯೆ

Bengaluru: B.Com student commits suicide by hanging himself

ಬೆಂಗಳೂರು,ಫೆ.21- ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜಯನಗರ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಲೊಟ್ಟೆ ಗೊಲ್ಲಹಳ್ಳಿಯ ನಿವಾಸಿ ಹೇಮಂತ್‌ (22) ಆತಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ನಗರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದನು.

ಈ ಯುವಕ ಮಾಜಿ ಸಿಎಂ ಬಸವರಾಜ ಬೊಮಾಯಿ ಅವರ ಪರ್ಸನಲ್‌ ಸೆಕ್ರೆಟರಿ (ಪಿಎಸ್‌‍) ಚಂದ್ರು ಎಂಬುವರ ಮಗ. ನಿನ್ನೆ ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವೇಲಿನಿಂದ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿದ್ದಾನೆ.

ಹೇಮಂತ್‌ ಆತಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸುದ್ದಿ ತಿಳಿದು ಸಂಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಎಂ.ಎಸ್‌‍.ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES

Latest News