Homeರಾಷ್ಟ್ರೀಯದೇಶದಲ್ಲಿ ಅರಾಜಕತೆ ಸೃಷ್ಟಿಯಾಗಲು ಬಿಜೆಪಿಯೇ ಕಾರಣ : ಹರಿಪ್ರಸಾದ್‌ ಆರೋಪ

ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಲು ಬಿಜೆಪಿಯೇ ಕಾರಣ : ಹರಿಪ್ರಸಾದ್‌ ಆರೋಪ

ನವದೆಹಲಿ, ಅ.12- ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಲು ಬಿಜೆಪಿಯೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ ಆರೋಪಿಸಿದರು.ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಆರ್‌ಎಸ್‌‍ಎಸ್‌‍ ಜನ ತಾಳಿದ್ದೇ ಅರಾಜಕತೆಯಿಂದ ಎಂದು ವಾಗ್ದಾಳಿ ನಡೆಸಿದರು.

ಸುಪ್ರೀಂಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿ, ನಂತರ ಅದನ್ನು ಉಲ್ಲಂಘನೆ ಮಾಡಿದ್ದು ಆರ್‌ಎಸ್‌‍ಎಸ್‌‍ ಮತ್ತು ಬಿಜೆಪಿಯವರು. ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ, ಅವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ತಿರುಗೇಟು ನೀಡಿದರು.

ಎಸ್‌‍ಐಆರ್‌ ಹೆಸರಿನಲ್ಲಿ 13 ಕೋಟಿ ಅರ್ಹ ಮತದಾರರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ. ಅದರ ವಿರುದ್ಧ ಕಾಂಗ್ರೆಸ್‌‍ನ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ನಾಯಕರು ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ರಾಷ್ಟ್ರಪತಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಇಂದು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವ ಸಲುವಾಗಿ ಸುಪ್ರೀಂಕೋರ್ಟ್‌ ಚಲೋ ಹಮಿಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ. ಸುಪ್ರೀಕೋರ್ಟ್‌ ಮುಖ್ಯ ನ್ಯಾಯಮೂರ್ತಿಯವರನ್ನು ಭೇಟಿ ಮಾಡುತ್ತಿರುವುದಕ್ಕೂ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ದೇಶದ ಜನರ ಸಮಸ್ಯೆ ಆಲಿಸಲಿಕ್ಕಾಗಿಯೇ ಸುಪ್ರೀಂಕೋರ್ಟ್‌ ಇದೆ.

ಈ ಮೊದಲು ಪೋಸ್ಟ್‌ ಕಾರ್ಡ್‌ನಲ್ಲಿ ಜನ ಸಾಮಾನ್ಯರು ಪತ್ರ ಬರೆದರೂ ಸುಪ್ರೀಂಕೋರ್ಟ್‌ ಅದನ್ನು ಮಾನ್ಯ ಮಾಡಿ ವಿಚಾರಣೆ ನಡೆಸಿ, ನ್ಯಾಯ ಕೊಡಿಸಿದ ಉದಾಹರಣೆಗಳಿವೆ. ಹೀಗಾಗಿ ಪ್ರಜಾಪ್ರಭತ್ವದ ವ್ಯವಸ್ಥೆಯಲ್ಲಿ ನಮ ಪಕ್ಷದ ನಾಯಕರು ನ್ಯಾಯಾಧೀಶರನ್ನು ಭೇಟಿಯಾಗುತ್ತಿದ್ದಾರೆ ಎಂದು ಹೇಳಿದರು.

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯವರನ್ನು ಭೇಟಿಯಾಗಲು ಆಯೋಜಿಸಲಾಗಿದ್ದ ಜಾಥಾದಲ್ಲಿ ದೇಶಾದ್ಯಂತದಿಂದ ಶಾಸಕರು, ಸಂಸದರು, ರಾಜ್ಯಸಭಾ ಸದಸ್ಯರು, ವಿಧಾನಪರಿಷತ್‌ ಸದಸ್ಯರು ಭಾಗವಹಿಸಿದ್ದರು ಎಂದು ಹರಿಪ್ರಸಾದ್‌ ವಿವರಿಸಿದರು.

RELATED ARTICLES
spot_img

Latest News