ನವದೆಹಲಿ,ಫೆ.1- ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿರುವ 5 ರಾಜ್ಯಗಳಿಗೆ ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಬಂಪರ್ ಕೊಡುಗೆ ನೀಡುವ ಮೂಲಕ ಮತದಾರರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ.ಸಾಮಾನ್ಯವಾಗಿ ಆಯಾ ವರ್ಷಗಳಲ್ಲಿ ಚುನಾವಣೆ ನಡೆಯುವ ರಾಜ್ಯಗಳನ್ನು ಗುರಿಯಾಗಿಟ್ಟುಕೊಂಡು ಒಂದಿಷ್ಟು ಹೊಸ ಯೋಜನೆಗಳನ್ನು ಘೋಷಣೆ ಮಾಡುವ ಮೂಲಕ ಮತದಾರರನ್ನು ಸೆಳೆಯುವುದು ವಾಡಿಕೆಯಾಗಿದೆ.
ಅದರಂತೆ ಸಂಸತ್‌ನಲ್ಲಿ 2026-27ನೇ ಸಾಲಿನ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಇದೇ ಮಾದರಿಯನ್ನು ಈ ಬಾರಿಯೂ ಅನುಸರಿಸಲಾಗಿದೆ. ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ 2026ನೇ ಸಾಲಿನ ಬಜೆಟ್‌ನಲ್ಲಿ ಬಂಪರ್ ಘೋಷಣೆ ಮಾಡಿದೆ.
4 ಪ್ರಮುಖ ರಾಜ್ಯಗಳಿಗೆ ಅರ್ಥ್ ಮಿನರಲ್ ಕಾರಿಡಾರ್ ಘೋಷಣೆ ಮಾಡಲಾಗಿದೆ. ಕೇರಳ, ಒಡಿಶಾ, ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯಗಳಿಗೆ ಈ ಬಾರಿ ಬಂಪರ್ ಕೊಡುಗೆ ಬಜೆಟ್‌ನಲ್ಲಿ ಸಿಕ್ಕಂತಾಗಿದೆ.
ಇದರಲ್ಲಿ ಗಮನಿಸಬೇಕಾದ ಅಂಶವೆಂದರೆ, 2026ನೇ ಸಾಲಿನಲ್ಲಿ ತಮಿಳುನಾಡು ಹಾಗೂ ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಆಂಧ್ರಪ್ರದೇಶದಲ್ಲಿ ಮಿತ್ರ ಪಕ್ಷ ತೆಲುಗು ದೇಶಂ ಪಾರ್ಟಿ ಇದ್ದರೆ, ಒಡಿಶಾದಲ್ಲಿ ಈಚೆಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿ ಇರಿಸಿಕೊಂಡು ಬಜೆಟ್‌ನಲ್ಲಿ ಬಂಪರ್ ಕೊಡುಗೆ ಕೊಡಲಾಗಿದೆ.
2026ನೇ ಸಾಲಿನಲ್ಲಿ ಒಂದು ಕೇಂದ್ರಾಡಳಿತ ಪ್ರದೇಶವೂ ಸೇರಿದಂತೆ 4 ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಬಾರಿ ವಿಧಾನಸಭೆ ಚುನಾವಣೆ ನಡೆಯಲಿರುವ ಪ್ರಮುಖ ರಾಜ್ಯಗಳಲ್ಲಿ ಬಿಜೆಪಿಯು ಒಂದೇ ಒಂದು ಬಾರಿಯೂ ಅಧಿಕಾರಕ್ಕೆ ಬಂದಿಲ್ಲ.
ಈ ಕಾರಣದಿಂದ ಈ ಬಾರಿಯ ಕೇಂದ್ರ ಬಜೆಟ್ ಮಹತ್ವ ಪಡೆದುಕೊಂಡಿತ್ತು. 2026ನೇ ಸಾಲಿನಲ್ಲಿ ಅಸ್ಸಾಂ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಹಾಗೂ ಪುದುಚೇರಿಯ ವಿಧಾನಸಭೆ ಚುನಾವಣೆ ಈ ವರ್ಷ ನಡೆಯಲಿದೆ. ಹೀಗಾಗಿ, ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಈ ರಾಜ್ಯಗಳಿಗೆ ಬಂಪರ್ ಕೊಡುಗೆ ಸಿಗಲಿದೆ.
ಕಳೆದ ಬಾರಿ ಕೇಂದ್ರ ಸರ್ಕಾರವು ಬಿಹಾರ ಹಾಗೂ ಆಂಧ್ರಪ್ರದೇಶ ರಾಜ್ಯಗಳಿಗೆ ಬಂಪರ್ ಕೊಡುಗೆಯನ್ನು ನೀಡಿತ್ತು. ಈ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಹಾಗೂ ಮೈತ್ರಿ ಪಕ್ಷಗಳನ್ನು ಮೆಚ್ಚಿಸುವ ತಂತ್ರವನ್ನು ಕೇಂದ್ರ ಸರ್ಕಾರವು ಕಳೆದ ಬಾರಿ ಅನುಸರಿಸಿತ್ತು.
