ಅಂಬಾಲ,ಜ.6– ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮತ್ತು ವಾಯುಪಡೆಯ ನಿಲ್ದಾಣದ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಒದಗಿಸುತ್ತಿದ್ದ ಆರೋಪದ ಮೇಲೆ ಹರಿಯಾಣದ ಅಂಬಾಲ ಪೊಲೀಸರು ಗುತ್ತಿಗೆ ನೌಕರನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಅಂಬಾಲ ನಿವಾಸಿ ಸುನಿಲ್ ಅಲಿಯಾಸ್ ಸನ್ನಿ ಎಂದು ಗುರುತಿಸಲಾಗಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಪರಾಧ ವಿಭಾಗದ ಡಿಎಸ್‌ಪಿ ವೀರೇಂದ್ರ ಕುಮಾರ್ ಹೇಳಿದ್ದಾರೆ.
ವಿಚಾರಣೆಯ ಸಮಯದಲ್ಲಿ, ಪೊಲೀಸರು ಆತನ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡು ಪರಿಶೀಲಿಸಿದಾಗ ಅನುಮಾನಾಸ್ಪದ ಚಟುವಟಿಕೆಗಳನ್ನು ಬಹಿರಂಗಪಡಿಸಿದೆ. ತನಿಖೆಯಲ್ಲಿ ಸುನಿಲ್ 2020 ರಿಂದ ವಾಯುಪಡೆ ನಿಲ್ದಾಣದಲ್ಲಿ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದು, ದುರಸ್ತಿ ಕೆಲಸವನ್ನು ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ.
ಪೊಲೀಸರ ಪ್ರಕಾರ, ಸುನಿಲ್ ಮಹಿಳೆಯೊಬ್ಬಳ ಜೊತೆ ಸಂಪರ್ಕದಲ್ಲಿದ್ದರು, ಆಕೆಗೆ ಮಾಹಿತಿಯನ್ನು ರವಾನಿಸುತ್ತಿದ್ದ.ಅವರು ಪಾಕಿಸ್ತಾನಕ್ಕೆ ಮಾಹಿತಿಯನ್ನು ಕಳುಹಿಸುತ್ತಿದ್ದರು ಎಂದು ತೋರಿಸಿದೆ ಎಂದು ತಿಳಿಸಿದ್ದಾರೆ.ತನಿಖೆ ಆರಂಭಿಕ ಹಂತದಲ್ಲಿದೆ. ಆರೋಪಿ ಸುನಿಲ್ ಅಲಿಯಾಸ್ ಸನ್ನಿ, ಅಂಬಾಲದಲ್ಲಿ ಪತ್ನಿ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ.ಅವನ ತಂದೆ ಭಾರತೀಯ ರೈಲ್ವೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ ಎಂದು ಗೊತ್ತಾಗಿದೆ.
ಇದಕ್ಕೂ ಮೊದಲು, ಹರಿಯಾಣ ಪೊಲೀಸರು ಮತ್ತೊಂದು ಘಟನೆಯಲ್ಲಿ ಕೈತಾಲ್ ನಿವಾಸಿ ದೇವೇಂದ್ರ ಎಂಬಾತನನ್ನು ಬಂಧಿಸಿ ಇತ್ತೀಚಿನ ಭಾರತ-ಪಾಕಿಸ್ತಾನ ಸಂಘರ್ಷದ ಸಮಯದಲ್ಲಿ ಪಾಕಿಸ್ತಾನ ಸೇನೆ ಮತ್ತು ಐಎಸ್‌ಐಗೆ ಮಾಹಿತಿಯನ್ನು ರವಾನಿಸಿದ ಆರೋಪದ ಮೇಲೆ ಬಂಧಿಸಿದ್ದಾರೆ. ದೇವೇಂದ್ರನ ವಿಚಾರಣೆಯ ಸಮಯದಲ್ಲಿ, ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್‌ಐ ಜೊತೆ ಸಂಪರ್ಕದಲ್ಲಿದ್ದಾಗ ಮತ್ತು ಆಪರೇಷನ್ ಸಿಂಧೂರ್ ಬಗ್ಗೆ ಪಾಕಿಸ್ತಾನ ಸೇನೆ ಮತ್ತು ದೇಶದ ಸಂಸ್ಥೆಗೆ ಕಾಲಕಾಲಕ್ಕೆ ಮಾಹಿತಿಯನ್ನು ನೀಡಿರುವುದಾಗಿ ಒಪ್ಪಿಕೊಂಡಿದ್ದಾನೆ.
