Saturday, April 18, 2026
Homeರಾಷ್ಟ್ರೀಯ33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ

33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ

Couple sentenced to death in sexual abuse case of 33 children

ಲಕ್ನೋ,ಫೆ.21- ದೇಶವನ್ನೇ ಬಿಚ್ಚಿಬೀಳಿಸಿದ್ದ 33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಗಿಯಾಗಿದ್ದ ದಂಪತಿಗೆ ಉತ್ತರ ಪ್ರದೇಶದ ನ್ಯಾಯಾಲಯವೊಂದು ಮರಣದಂಡನೆ ವಿಧಿಸಿದೆ. ಉತ್ತರ ಪ್ರದೇಶದ ಬಂದಾದಲ್ಲಿರುವ ಪೋಕ್ಸೊ ಕಾಯ್ದೆಯ ವಿಶೇಷ ನ್ಯಾಯಾಲಯದಿಂದ ಈ ಮಹತ್ವದ ತೀರ್ಪು ನೀಡಿದೆ.

ರಾಮಭವನ್‌ ಮತ್ತು ಪತ್ನಿ ದುರ್ಗಾವತಿ ಶಿಕ್ಷೆಗೆ ಒಳಗಾದ ಅಪರಾಧಿಗಳಾಗಿದ್ದರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ಹಲವಾರು ವಿಭಾಗಗಳ ಅಡಿಯಲ್ಲಿ ಶಿಕ್ಷೆಗೊಳಪಡಿಸಲಾಗಿದೆ.ಸಂತ್ರಸ್ತ ಮಕ್ಕಳಲ್ಲಿ ಕೆಲವರು ಮೂರು ವರ್ಷ ವಯಸ್ಸಿನವರಾಗಿದ್ದಾರೆ. ಪ್ರಸ್ತುತ ದೌರ್ಜನ್ಯಕ್ಕೆ ಒಳಗಾದ ಪ್ರತಿಯೊಬ್ಬರಿಗೂ ಸರ್ಕಾರ 10 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ನ್ಯಾಯಾಲಯ ಆದೇಶಿಸಿದೆ.

ಇದರ ಜೊತೆಗೆ, ಆರೋಪಿಯ ಮನೆಯಿಂದ ವಶಪಡಿಸಿಕೊಂಡ ಹಣವನ್ನು ಸಂತ್ರಸ್ತ ಮಕ್ಕಳಿಗೆ ಸಮಾನವಾಗಿ ಹಂಚಬೇಕು ಎಂದು ನ್ಯಾಯಾಲಯ ಹೇಳಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಸಿಬಿಐ ಕಳೆದ 2020ರ ಅಕ್ಟೋಬರ್‌ನಲ್ಲಿ ರಾಮಭವನ್‌ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿತ್ತು.

ತನಿಖೆಯ ಸಮಯದಲ್ಲಿ, ಆರೋಪಿಗಳು ಲೈಂಗಿಕ ಅಪರಾಧಗಳನ್ನು ಮಾಡಿದ್ದಾರೆ ಎಂದು ಸಿಬಿಐ ರುಚುವಾತು ಮಾಡಿತ್ತು.ಈ ಅಪರಾಧಗಳು ಅನಾಗರಿಕವಾಗಿದ್ದವು. ಸಂತ್ರಸ್ತೆಯರಲ್ಲಿ ಕೆಲವರ ಖಾಸಗಿ ಭಾಗಗಳಲ್ಲಿ ಗಾಯಗಳಾಗಿದ್ದವು. ಅವರಲ್ಲಿ ಕೆಲವರು ವರ್ಷಗಳ ಕಾಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕಾಯಿತು ಎಂದು ಸಿಬಿಐ ಹೇಳಿದೆ.

RELATED ARTICLES

Latest News