Homeರಾಷ್ಟ್ರೀಯಅಯ್ಯಪ್ಪ ಭಕ್ತರಿಗೆ ಮಹತ್ವದ ಎಚ್ಚರಿಕೆ : ಪಂಪಾ ನದಿಗೆ ಬಟ್ಟೆ ಎಸೆದರೆ 5,000 ದಂಡ

ಅಯ್ಯಪ್ಪ ಭಕ್ತರಿಗೆ ಮಹತ್ವದ ಎಚ್ಚರಿಕೆ : ಪಂಪಾ ನದಿಗೆ ಬಟ್ಟೆ ಎಸೆದರೆ 5,000 ದಂಡ

ಶಬರಿಮಲೆ, ನ.23- ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಜಿಲ್ಲಾಡಳಿತ ಮಹತ್ವದ ಎಚ್ಚರಿಕೆ ನೀಡಿದೆ. ಪವಿತ್ರ ಪಂಪಾ ನದಿಯಲ್ಲಿ ಬಟ್ಟೆಗಳನ್ನು ಎಸೆಯುವುದು ಅಥವಾ ನದಿಯನ್ನು ಕಲುಷಿತಗೊಳಿಸುವ ಚಟುವಟಿಕೆಗಳಲ್ಲಿ ತೊಡಗಿದರೆ 5,000 ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಮಕರವಿಳಕ್ಕು ಉತ್ಸವದ ಹಿನ್ನೆಲೆಯಲ್ಲಿ ನದಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯವನ್ನು ನಿಯಂತ್ರಿಸಲು ಜಿಲ್ಲಾಡಳಿತ ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಮಕರವಿಳಕ್ಕು ಉತ್ಸವದ ಸಂದರ್ಭದಲ್ಲಿ ಡಿಸೆಂಬರ್‌ ಮತ್ತು ಜನವರಿ ತಿಂಗಳಲ್ಲಿ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಶಬರಿಮಲೆಗೆ ಆಗಮಿಸುತ್ತಾರೆ. ಯಾತ್ರೆಯ ಭಾಗವಾಗಿ ಪವಿತ್ರ ಪಂಪಾ ನದಿಯಲ್ಲಿ ಸ್ನಾನ ಮಾಡುವುದು ಸಂಪ್ರದಾಯವಾಗಿದೆ. ಆದರೆ, ಸ್ನಾನದ ಬಳಿಕ ಭಕ್ತರು ತಮ್ಮ ಒದ್ದೆಯಾದ ಬಟ್ಟೆಗಳನ್ನು ನದಿಯಲ್ಲಿ ಅಥವಾ ನದಿ ತೀರದಲ್ಲಿ ಬಿಟ್ಟು ಹೋಗುತ್ತಿರುವುದರಿಂದ ಮಾಲಿನ್ಯ ಹೆಚ್ಚಾಗುತ್ತಿದೆ.

ಜಿಲ್ಲಾಡಳಿತದ ಮಾಹಿತಿ ಪ್ರಕಾರ, ಉತ್ಸವದ ಅವಧಿಯಲ್ಲಿ ಪ್ರತಿದಿನ ಹಲವಾರು ಟನ್‌ಗಳಷ್ಟು ಬಟ್ಟೆಗಳನ್ನು ಪಂಪಾ ನದಿಗೆ ಎಸೆಯಲಾಗುತ್ತಿದೆ. ಇದರಿಂದ ನದಿಯ ಸ್ವಚ್ಛತೆ ಮತ್ತು ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಟ್ಟೆ ಹಾಗೂ ಇತರ ತ್ಯಾಜ್ಯಗಳನ್ನು ನದಿಗೆ ಎಸೆಯುವುದನ್ನು ತಡೆಯಲು ಆಡಳಿತ ಹೊಸ ಆದೇಶ ಹೊರಡಿಸಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023ರ ಸೆಕ್ಷನ್‌ 163 ಹಾಗೂ ಕೇರಳ ಪಂಚಾಯತ್‌ ರಾಜ್‌ ಕಾಯ್ದೆ, 1994ರ ಸೆಕ್ಷನ್‌ 219ಎನ್‌ (1) ಮತ್ತು (3)ರ ಅಡಿಯಲ್ಲಿ ಈ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಆದೇಶ ಉಲ್ಲಂಘಿಸಿ ನದಿಗೆ ಬಟ್ಟೆ, ಪ್ಲಾಸ್ಟಿಕ್‌ ಅಥವಾ ಇತರ ತ್ಯಾಜ್ಯಗಳನ್ನು ಎಸೆಯುವವರಿಗೆ ಸ್ಥಳದಲ್ಲೇ ₹5,000 ವರೆಗೆ ದಂಡ ವಿಧಿಸಲಾಗುತ್ತದೆ.

RELATED ARTICLES

Latest News