ಭಂಡಾರ, ಸೆ.11 (ಪಿಟಿಐ): ಮಹಾರಾಷ್ಟ್ರದ ಭಂಡಾರ ಜಿಲ್ಲೆಯಲ್ಲಿ ಇಂದು ಮುಂಜಾನೆ ಟ್ರಕ್ ಮತ್ತು ಎಸ್‌ಯುವಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಖನಿ ತಾಲೂಕಿನ ಮಾನೆಗಾಂವ್ ಮತ್ತು ಪಿಂಪಲ್‌ಗಾಂವ್ ನಡುವಿನ ರಾಷ್ಟ್ರೀಯ ಹೆದ್ದಾರಿ 53ರಲ್ಲಿ ಬೆಳಿಗ್ಗೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಬೊಲೆರೊ ವಾಹನವೊಂದು ಐಶರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಬೊಲೆರೊದಲ್ಲಿದ್ದ ಐವರು ವಯಸ್ಕರು ಹಾಗೂ ಮೂವರು ಮಕ್ಕಳು ಸೇರಿ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರು ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಿಂದ ರಾಷ್ಟ್ರೀಯ ಹೆದ್ದಾರಿ 53ರ ಮೂಲಕ ನಾಗಪುರಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
