Tuesday, January 27, 2026
Homeರಾಷ್ಟ್ರೀಯರಾಜಸ್ಥಾನ : ಜೈಪುರ-ಬಿಕಾನೆರ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್‌ಗೆ ಬಸ್‌‍ ಡಿಕ್ಕಿಯಾಗಿ ನಾಲ್ವರು ಸಾವು

ರಾಜಸ್ಥಾನ : ಜೈಪುರ-ಬಿಕಾನೆರ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್‌ಗೆ ಬಸ್‌‍ ಡಿಕ್ಕಿಯಾಗಿ ನಾಲ್ವರು ಸಾವು

Four killed, 27 injured in bus-truck collision on Jaipur-Bikaner National Highway

ಜೈಪುರ,ಡಿ.10-ರಾಜಸ್ಥಾನದ ಸಿಕಾರ್‌ ಜಿಲ್ಲೆಯ ಜೈಪುರ-ಬಿಕಾನೆರ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ರಾತ್ರಿ ಬಸ್‌‍ ಮತ್ತು ಟ್ರಕ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, 27 ಜನರು ಗಾಯಗೊಂಡಿದ್ದಾರೆ.

ಬಿಕಾನೆರ್‌ ನಿಂದ ಜೈಪುರ ಕಡೆಗೆ ಪ್ರಯಾಣಿಸುತ್ತಿದ್ದ ಸ್ಲೀಪರ್‌ ಬಸ್‌‍ ಮತ್ತು ಟ್ರಕ್‌ ಪರಸ್ಪರ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಬಸ್‌‍ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ,ಮತ್ತು 15 ಗಾಯಾಳುಗಳನ್ನು ಸಿಕಾರ್‌ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು 13 ಜನರಿಗೆ ಫತೇಘರ್‌ನಲ್ಲಿ ಪ್ರಾಥಮಿಕ ಚಿಕಿತ್ಸೆನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ನಂತರ ಪ್ರಯಾಣಿಕರ ಗುಂಪು ಗುಜರಾತ್‌ಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

Latest News