ತಿರುವನಂತಪುರಂ,ಜ.12- ರಾಜ್ಯ ಸಾರಿಗೆ ಎಲೆಕ್ಟ್ರಿಕ್ ಬಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಂದು ಹಸೆಮಣೆ ಏರಬೇಕಿದ್ದ ವರ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಶ್ರೀಕಾರ್ಯಂನಲ್ಲಿ ನಡೆದಿದೆ.ಮೃತನನ್ನು ಚೆಂಪಝಂತಿ ಚೆಲ್ಲಮಂಗಲಂ ಮೂಲದ ರಾಗೇಶ್(28) ಎಂದು ಗುರುತಿಸಲಾಗಿದೆ.
ಬೆಳಿಗ್ಗೆ ದೇವಸ್ಥಾನದಲ್ಲಿ ಮದುವೆ ನಡೆಯಬೇಕಿತ್ತು.ಪಂಗಪ್ಪರ ಮಂಗುಝಿನಿಂದ ಮುಂಜಾನೆ 1 ಗಂಟೆ ಸುಮಾರಿಗೆ ಕಣಿಯಾಪುರಂ ಡಿಪೋದಲ್ಲಿ ಚಾರ್ಜ್ ಮಾಡಿದ ನಂತರ ವಿಕಾಸ್ ಭವನ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಎಲೆಕ್ಟ್ರಿಕ್ ಬಸ್‌ಗೆ ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖೆ ಪ್ರಾರಂಭಿಸಲಾಗಿದೆ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಶ್ರೀಕಾರ್ಯಂ ಪೊಲೀಸರು ತಿಳಿಸಿದ್ದಾರೆ.ಕುಟುಂಬಗಳು ಈ ಸಂಬಂಧವನ್ನು ವಿರೋಧಿಸುತ್ತಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ, ನಂತರ ರಾಗೇಶ್ ಮತ್ತು ಯುವತಿ ದೇವಸ್ಥಾನದಲ್ಲಿ ಮದುವೆ ಮಾಡಿಕೊಂಡು ನಂತರ ಉಪನೊಂದಾಣಿಕಾರಿ ಕಚೇರಿಯಲ್ಲಿ ವಿವಾಹ ನೋಂದಾಯಿಸಲು ನಿರ್ಧರಿಸಿದ್ದರು.
ಈ ಉದ್ದೇಶಕ್ಕಾಗಿ ಅವರು ಚಾಂತವಿಲಾದಲ್ಲಿ ಒಂದು ಮನೆಯನ್ನು ಬಾಡಿಗೆಗೆ ಪಡೆದಿದ್ದರು.ರಾಗೇಶ್ ಸಂಬಂಧಿಕರ ಮನೆಗೆ ಭೇಟಿ ನೀಡಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಅವರ ತಲೆಗೆ ತೀವ್ರ ಗಾಯಗಳಾಗಿ ಸ್ಥಳದಲ್ಲೇ ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ, ಡಿಕ್ಕಿಯಲ್ಲಿ ಬೈಕ್ ಸಂಪೂರ್ಣವಾಗಿ ಹಾನಿಗೊಳಗಾಗಿದೆ.ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
