ನವದೆಹಲಿ, ಜೂ.2-ಉತ್ತರ ದೆಹಲಿಯ ಮುಕುಂದಪುರ ಪ್ರದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟದಿಂದ ಏಕಮಹಡಿ ಮನೆ ಕುಸಿದ ಪರಿಣಾಮ ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳುಅವಶೇಷದಡಿ ಸಿಲುಕಿದ್ದ 11 ಜನರನ್ನು ರಕ್ಷಿಸಿದ್ದಾರೆ.
ಘಟನೆಯಲ್ಲಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಕುಂದಪುರ-2ರ ಈಶು ವಿಹಾರದ ಗಲ್ಲಿ ನಂ. 1ರಲ್ಲಿ, ಸಶಾನದ ಸಮೀಪ ಂದು ಬೆಳಿಗ್ಗೆ ಈ ಘಟನೆ ಸಂಭವಿಸಿದೆ.
ಬೆಳಿಗ್ಗೆ 9.37ಕ್ಕೆ ಸ್ಫೋಟ ಸಮಭವಿಸಿ ಮನೆ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿತ್ತು.ಮಾಹಿತಿ ದೊರಕುತ್ತಿದ್ದಂತೆ ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ .
ಪ್ರಾಥಮಿಕ ತನಿಖೆಯ ಪ್ರಕಾರ, ದೊಡ್ಡ ಗ್ಯಾಸ್ ಸಿಲಿಂಡರ್‌ನಿಂದ ಸಣ್ಣ ಸಿಲಿಂಡರ್‌ಗೆ ಅನಿಲ ವರ್ಗಾವಣೆ ಮಾಡುವ ವೇಳೆ ಸ್ಫೋಟ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಥಳದಿಂದ ಕೆಲವು ಗ್ಯಾಸ್ ಸಿಲಿಂಡರ್‌ಗಳನ್ನೂ ಪತ್ತೆಹಚ್ಚಲಾಗಿದೆ.
ಉತ್ತರ ಹೊರವಲಯದ ಉಪ ಪೊಲೀಸ್ ಆಯುಕ್ತ ಹರೇಶ್ವರ್ ಸ್ವಾಮಿ ಮಾತನಾಡಿ, ಱಱ11 ಜನರನ್ನು ರಕ್ಷಿಸಲಾಗಿದೆ. ಅವರಲ್ಲಿ ಓರ್ವ ಮಹಿಳೆಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಮನೆಯಲ್ಲಿ ಪಾತ್ರೆಗಳಿಗೆ ಬಣ್ಣ ಹಚ್ಚುವ ಕಾರ್ಖಾನೆ ಕಾರ್ಯನಿರ್ವಹಿಸುತ್ತಿತ್ತುೞೞ ಎಂದು ತಿಳಿಸಿದ್ದಾರೆ.
ಸ್ಥಳೀಯ ನಿವಾಸಿಗಳು ಹಾಗೂ ಪೊಲೀಸರು ಸೇರಿ ಅವಶೇಷಗಳಡಿ ಸಿಲುಕಿದ್ದ ನಾಲ್ಕೈದು ಗಾಯಾಳುಗಳನ್ನು ಹೊರತೆಗೆದು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.ಪ್ರತ್ಯಕ್ಷದರ್ಶಿಯೊಬ್ಬರು, ಭಾರೀ ಸ್ಫೋಟದ ಶಬ್ದ ಕೇಳಿದ ತಕ್ಷಣ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿದೆ ಎಂದು ಅನಿಸಿತು.
ಸ್ಥಳಕ್ಕೆ ಧಾವಿಸಿದಾಗ ಮನೆ ಸಂಪೂರ್ಣ ಕುಸಿದಿರುವುದು ಕಂಡುಬಂತು. ಎಲ್ಲೆಡೆ ಧೂಳು ತುಂಬಿತ್ತು ಮತ್ತು ಜನರು ಸಹಾಯಕ್ಕಾಗಿ ಕೂಗುತ್ತಿದ್ದರು ಎಂದು ಹೇಳಿದರು. ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ಹಾಗೂ ಸಂಬಂಧಿತ ಇಲಾಖೆಗಳು ತನಿಖೆ ನಡೆಸುತ್ತಿವೆ.
