ನವದೆಹಲಿ, ಸೆ.4- (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಶ್ರೀಕೃಷ್ಣನ ದೈವಿಕ ಸಂದೇಶಗಳು ನಿಸ್ವಾರ್ಥ ಕರ್ಮಕ್ಕೆ ಆಳವಾದ ಸ್ಫೂರ್ತಿ ನೀಡುತ್ತಿದ್ದು, ಮಾನವಕುಲಕ್ಕೆ ನಿರಂತರವಾಗಿ ಮಾರ್ಗದರ್ಶನ ಮಾಡುತ್ತಿವೆ ಎಂದು ಅವರು ಹೇಳಿದ್ದಾರೆ.
ಜನ್ಮಾಷ್ಟಮಿಯಂದು ಎಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳು ಎಂದು ಹಿಂದಿಯಲ್ಲಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಶ್ರೀಕೃಷ್ಣನ ದೈವಿಕ ಸಂದೇಶಗಳು ನಿಸ್ವಾರ್ಥ ಕರ್ಮಕ್ಕೆ ಆಳವಾದ ಸ್ಫೂರ್ತಿಯಾಗಿವೆ. ಅವು ಮಾನವೀಯತೆಗೆ ನಿರಂತರವಾಗಿ ಮಾರ್ಗದರ್ಶನ ನೀಡುತ್ತಿವೆ ಎಂದು ತಿಳಿಸಿದ್ದಾರೆ.
ಈ ಶುಭ ಸಂದರ್ಭದಲ್ಲಿ ಶ್ರೀಕೃಷ್ಣನ ಭಕ್ತಿ ಹಾಗೂ ಆರಾಧನೆಗೆ ಸಮರ್ಪಿತವಾಗಿರುವ ಈ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಕಾರಾತ್ಮಕತೆ, ಶಕ್ತಿ ಮತ್ತು ಸಾಮರ್ಥ್ಯವನ್ನು ತುಂಬಲಿ ಎಂದು ಪ್ರಧಾನಿ ಆಶಿಸಿದ್ದಾರೆ.ಶ್ರೀಕೃಷ್ಣನ ಜನ್ಮವನ್ನು ಸ್ಮರಿಸುವ ಸಲುವಾಗಿ ದೇಶಾದ್ಯಂತ ಜನ್ಮಾಷ್ಟಮಿ ಆಚರಿಸಲಾಗುತ್ತದೆ.
ಶ್ರೀಕೃಷ್ಣ ಜನ್ಮಾಷ್ಟಮಿಗೆ ದೇವೇಗೌಡರ ಶುಭಾಶಯ
ನಾಡಿನ ಸಮಸ್ತ ಜನತೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳನ್ನು ಕೋರಿದ್ದಾರೆ.ಈ ಸಂಬಂಧ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಜಗದೋದ್ಧಾರಕ ಶ್ರೀಕೃಷ್ಣ ಪರಮಾತ್ಮನು ಗೀತೋಪದೇಶದ ಮೂಲಕ ತೋರಿಸಿಕೊಟ್ಟ ಧರ್ಮ, ನ್ಯಾಯ ಮತ್ತು ಕರ್ಮದ ಹಾದಿ ನಮ್ಮೆಲ್ಲರ ಬದುಕಿಗೆ ಸದಾ ದಾರಿದೀಪವಾಗಲಿ ಎಂದು ಆಶಿಸಿದ್ದಾರೆ.ನಾಡಿನ ಎಲ್ಲರ ಬಾಳಲ್ಲಿ ಸುಖ, ಶಾಂತಿ ಹಾಗೂ ಸಮೃದ್ಧಿ ನೆಲೆಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ಕುಮಾರಸ್ವಾಮಿ ಶುಭಾಶಯ
ನಾಡಿನ ಎಲ್ಲರಿಗೂ ಶ್ರೀಕೃಷ್ಣ ಜನ್ಮಾಷ್ಟಮಿಯ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಕೋರಿದ್ದಾರೆ. ಜಗದೋದ್ಧಾರಕ ಶ್ರೀಕೃಷ್ಣನು ಸರ್ವರಿಗೂ ಶುಭವನ್ನುಂಟು ಮಾಡಲಿ. ಎಲ್ಲೆಡೆ ಸುಖ, ಶಾಂತಿ, ನೆಮ್ಮದಿ ಮತ್ತು ಸಮೃದ್ಧಿ ನೆಲೆಸುವಂತೆ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
