ಗುವಾಹಟಿ, ಅ.14 (ಪಿಟಿಐ)- ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
ವಾಹನವೊಂದರಲ್ಲಿ ವಿಶೇಷವಾಗಿ ನಿರ್ಮಿಸಲಾಗಿದ್ದ ರಹಸ್ಯ ಕೋಣೆಗಳಿಂದ 27.3 ಕೆ.ಜಿ. ಶಂಕಿತ ಅಫೀಮನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಶರ್ಮಾ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ ಪೊಲೀಸರನ್ನು ಶರ್ಮಾ ಶ್ಲಾಘಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
