ಮುಂಬೈ, ಡಿ. 18: ಕಾಮುಕನೊಬ್ಬ ತಂಪು ಪಾನೀಯಗಳಲ್ಲಿ ನಿದ್ರೆ ಮಾತ್ರೆ ಬೆರೆಸಿ ಹಲವಾರು ಅಪ್ರಾಪ್ತ ಬಾಲಕಿಯರ ಅತ್ಯಾಚಾರ ನಡೆಸಿರುವ ಘಟನೆ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ನಡೆದಿದೆ. ಈ ಘಟನೆ ಇಡಿ ನಗರವನ್ನು ಬೆಚ್ಚಿ ಬೀಳಿಸಿದೆ.ಇತ್ತಿಚೆಗೆ 10 ವರ್ಷದ ಬಾಲಕಿಗೆ ನಿದ್ರೆ ಮಾತ್ರೆ ಬೆರೆಸಿದ ಪಾನೀಯ ನೀಡಿ ಅತ್ಯಾಚಾರ ಮಾಡಿದ್ದೇ ಅಲ್ಲದೆ, ತನ್ನ ಕ್ರೌರ್ಯವನ್ನು ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಹೇಶ್ ರಮೇಶ್ ಪವಾರ್ (45) ಎಂದು ಗುರುತಿಸಲಾಗಿದೆ.
ಆರೋಪಿ ಇದೇ ರೀತಿ ಹಲವಾರು ಬಾಲಕಿಕಯರ ಮೇಲೆ ಅತ್ಯಾಚಾರ ಮಾಡಿ, ಅಶ್ಲೀಲ ವಿಡಿಯೋಗಳನ್ನು ರೆಕಾರ್ಡ್ ಮಾಡಿ, ಸಂತ್ರಸ್ತೆಯರನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಎನ್ನಲಾಗಿದೆ. ಮಾತ್ರವಲ್ಲ, ಆರೋಪಿಯು ಇಲ್ಲಿಯವರೆಗೆ 8 ರಿಂದ 10 ಹುಡುಗಿಯರ ಮೇಲೆ ಅತ್ಯಾಚಾರ ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಪ್ರಾಪ್ತ ಬಾಲಕಿಯರಿಗೆ ತಂಪು ಪಾನೀಯಗಳಲ್ಲಿ ನಿದ್ರಾಜನಕ ಮಾತ್ರೆಗಳನ್ನು ಬೆರೆಸಿ ಮಾದಕ ದ್ರವ್ಯ ನೀಡಿ, ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ನಂತರ ಅವರ ಆಕ್ಷೇಪಾರ್ಹ ವೀಡಿಯೊಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ.ಕುರಾರ್ ಪೊಲೀಸರು ತ್ವರಿತವಾಗಿ ಕಾರ್ಯನಿರ್ವಹಿಸಿ ದೂರು ದಾಖಲಾದ ಆರು ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸ್ ಇನ್ಸ್ ಪೆಕ್ಟರ್ ಸಂಜಯ್ ತಾವ್ಡೆ ಅವರ ಮಾರ್ಗದರ್ಶನದಲ್ಲಿ ಕುರಾರ್ ಪೊಲೀಸ್ ಪತ್ತೆ ತಂಡವು ವಿರಾರ್ನಲ್ಲಿ ಆತನನ್ನು ಬಂಧಿಸಿದೆ.ಪೊಲೀಸ್ ಅಧಿಕಾರಿಗಳ ಪ್ರಕಾರ, ಆರೋಪಿಗಳು ಅಪ್ರಾಪ್ತ ವಯಸ್ಸಿನ ಹುಡುಗಿಯರಿಗೆ ತಂಪು ಪಾನೀಯಗಳನ್ನು ನೀಡುವ ನೆಪದಲ್ಲಿ ಆಮಿಷ ಒಡ್ಡಿ, ಅದರಲ್ಲಿ ಮಾದಕ ಮಾತ್ರೆಗಳನ್ನು ಬೆರೆಸುತ್ತಿದ್ದ ಎನ್ನಲಾಗಿದೆ.
ಹೆಣ್ಣುಮಕ್ಕಳು ಪ್ರಜ್ಞೆ ತಪ್ಪಿದ ನಂತರ, ಆತ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೃತ್ಯದ ವೀಡಿಯೊಗಳನ್ನು ರೆಕಾರ್ಡ್ ಮಾಡುತ್ತಿದ್ದ. ನಂತರ ಆರೋಪಿ ಈ ವೀಡಿಯೊಗಳನ್ನು ಬಳಸಿಕೊಂಡು ಅವರನ್ನು ಪದೇ ಪದೇ ಬ್ಲ್ಯಾಕ್ಮೇಲ್ ಮಾಡಿ ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಎನ್ನಲಾಗಿದೆ.
