ಇಟಾನಗರ, ಸೆ. 13 (ಪಿಟಿಐ) – ಎಪ್ಪತ್ತು ವರ್ಷದ ವೃದ್ಧೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿರುವ ಹೀನಕೃತ್ಯ ಅರುಣಾಚಲ ಪ್ರದೇಶದ ಲೋವರ್ ದಿಬಾಂಗ್ ವ್ಯಾಲಿಯ ಹಳ್ಳಿಯೊಂದರಲ್ಲಿ ನಡೆದಿದೆ.
ಕೃಷಿ ಭೂಮಿಯಿಂದ ಮನೆಗೆ ಮರಳುತ್ತಿದ್ದ 70 ವರ್ಷದ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಮಹಿಳೆಯ ಕುತ್ತಿಗೆಯನ್ನು ಬಿಗಿದು, ಬಲವಂತವಾಗಿ ಕೆಳಗೆ ಕೆಡವಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಆ ಸ್ಥಳದತ್ತ ಕೆಲವರು ಬರುತ್ತಿರುವುದನ್ನು ಗಮನಿಸಿದ ಆತ ಅಲ್ಲಿಂದ ಪರಾರಿಯಾದನು ಎಂದು ಪೊಲೀಸರು ತಿಳಿಸಿದ್ದಾರೆ.
ಸೆಪ್ಟೆಂಬರ್ 9 ರಂದು ನಡೆದ ಈ ಘಟನೆಗೆ ಸಂಬಂಧಿಸಿದಂತೆ, ಅತ್ಯಾಚಾರ ಮತ್ತು ಕೊಲೆ ಯತ್ನಕ್ಕೆ ಸಂಬಂಧಿಸಿದ ಸೆಕ್ಷನ್ಗಳು ಸೇರಿದಂತೆ ಬಿಎನ್ಎಸ್ ನ ವಿವಿಧ ನಿಬಂಧನೆಗಳ ಅಡಿಯಲ್ಲಿ ಡಂಬುಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಕಾಂಗೆ ಪರ್ಟಿನ್ ಎಂದು ಗುರುತಿಸಲಾದ ಆರೋಪಿಯನ್ನು ನಂತರ ಬಂಧಿಸಲಾಯಿತು. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅರುಣಾಚಲ ಪ್ರದೇಶ ಮಹಿಳಾ ಕಲ್ಯಾಣ ಸಂಘ ಈ ಘಟನೆಯನ್ನು ಖಂಡಿಸಿದ್ದು, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
