Friday, April 17, 2026
Homeರಾಷ್ಟ್ರೀಯಹುಚ್ಚು ಪ್ರೀತಿಗಾಗಿ ಹೆತ್ತವರಿಗೆ ವಿಷವಿಟ್ಟ ಪುತ್ರಿ

ಹುಚ್ಚು ಪ್ರೀತಿಗಾಗಿ ಹೆತ್ತವರಿಗೆ ವಿಷವಿಟ್ಟ ಪುತ್ರಿ

Minor Girl Mixes Rat Poison In Chapatis to Kill Parents In Morena

ಮರೆನಾ, ಏ. 13- ಸ್ನೇಹಿತನನ್ನು ಮದುವೆ ಯಾಗುವ ಉದ್ದೇಶದಿಂದ ಅಪ್ರಾಪ್ತ ಬಾಲಕಿ ಯೊಬ್ಬಳು ತನಗೆ ಜೀವ ಕೊಟ್ಟ ತಂದೆ-ತಾಯಿಗೆ ವಿಷವಿಟ್ಟು ಕೊಲ್ಲಲು ಯತ್ನಿಸಿರುವ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.ಪ್ರೀತಿಯ ಅಮಲಿನಲ್ಲಿ ಕುರುಡಾ ಗಿದ್ದ ನೀಚ ಬಾಲಕಿ ಚಪಾತಿಯಲ್ಲಿ ಇಲಿ ಪಾಷಾಣ ಬೆರೆಸಿ ಹೆತ್ತವರನ್ನೇ ಮುಗಿಸಲು ಸಂಚು ರೂಪಿಸಿದ್ದಳು.

ಮೊರೆನಾ ಜಿಲ್ಲೆಯ ಪೋರ್ಸಾ ಎಂಬಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಪ್ರೇಮಕ್ಕೆ ಪೋಷಕರು ಅಡ್ಡಿಯಾಗುತ್ತಾರೆಂಬ ಕಾರಣಕ್ಕಾಗಿ ಆಕೆ ತನ್ನ ಗೆಳೆಯ ಸುದಾಮನ ಜೊತೆ ಸೇರಿ ಮನುಷ್ಯತ್ವಕ್ಕೆ ಬೆಲೆ ಇಲ್ಲದಂತಹ ಕೀಳು ಪ್ಲಾನ್‌ ರೂಪಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ,ಚಪಾತಿ ಹಿಟ್ಟಿನಲ್ಲಿ ಇಲಿ ವಿಷ ಬೆರೆಸಿದ್ದಾಳೆ. ಇದನ್ನು ತಿಂದ ತಾಯಿ ಮಿಥಿಲೇಶ್‌ ಮತ್ತು ತಂದೆ ಗಬ್ಬರ್‌ ಪ್ರಜಾಪತಿ ಅವರ ಆರೋಗ್ಯ ತಕ್ಷಣವೇ ಹದಗೆಟ್ಟಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ.

ಈ ಪ್ರಕರಣವು ಆರಂಭದಲ್ಲಿ ಕೇವಲ ಡ್‌ಪಾಯ್ಸನ್‌ನಿಂದ ಆಗಿರಬಹುದು ಎಂದೇ ನಂಬಲಾಗಿತ್ತು. ಆದರೆ ಪೊಲೀಸರಿಗೆ ಸಿಕ್ಕ ಒಂದು ಆಡಿಯೋ ಕ್ಲಿಪ್‌ ಮಗಳ ಕರ್ಮಕಾಂಡವನ್ನು ಬಯಲು ಮಾಡಿದೆ.ಹತ್ತಿರದಲ್ಲೇ ಗೊಬ್ಬರದ ಅಂಗಡಿ ಇದೆ, ಅಲ್ಲಿಂದ ಇಲಿ ವಿಷ ತಂದಿಟ್ಟುಕೊ. ಇವತ್ತು ನಾನೇ ರೊಟ್ಟಿ ಮಾಡುತ್ತಿದ್ದೇನೆ, ನನಗೆ ಒಳ್ಳೆಯ ಅವಕಾಶ ಸಿಕ್ಕಿದೆ. ರೊಟ್ಟಿಯಲ್ಲಿ ವಿಷ ಬೆರೆಸಿ ಅವರಿಗೆ ತಿನ್ನಿಸಿಬಿಡುತ್ತೇನೆ ಎಂದು ಆಕೆ ಹೇಳಿದ್ದಳು ಎನ್ನುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಆ ಸಂಭಾಷಣೆ ಪೊಲೀಸರ ಕೈಗೆ ಸಿಕ್ಕ ನಂತರವೇ ಮಗಳ ಕ್ರೂರ ಮುಖ ಅನಾವರಣಗೊಂಡಿದೆ.

ಪೋಷಕರಾದ ಮಿಥಿಲೇಶ್‌ ಮತ್ತು ಗಬ್ಬರ್‌ ಪ್ರಜಾಪತಿ ಅವರು ಪ್ರಾಣಾಪಾಯದಿಂದ ಪಾರಾದ ನಂತರ ಪೋರ್ಸಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆಡಿಯೋ ಸಾಕ್ಷ್ಯ ಮತ್ತು ಪೋಷಕರ ದೂರಿನ ಆಧಾರದ ಮೇಲೆ ಪೊಲೀಸರು ಅಪ್ರಾಪ್ತ ಬಾಲಕಿ ಮತ್ತು ಆಕೆಯ ಗೆಳೆಯ ಸುಧಾಮನ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಿದ್ದಾರೆ.

RELATED ARTICLES

Latest News