ಬಿಜಾಪುರ, ಜ.3- ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 12 ಕ್ಕೂ ಹೆಚ್ಚು ನಕ್ಸಲರು ಸಾವನ್ನಪ್ಪಿದ್ದಾರೆ.
ಛತ್ತೀಸ್‌ಗಢ ಪೊಲೀಸರ ಜಿಲ್ಲಾ ಮೀಸಲು ಗಾರ್ಡ್‌ನ ತಂಡವು ಈ ಪ್ರದೇಶದಲ್ಲಿ ಮಾವೋವಾದಿ ಕಾರ್ಯಕರ್ತರು ಇರುವ ಬಗ್ಗೆ ಮಾಹಿತಿ ಪಡೆದು ಕಾರ್ಯಾಚರಣೆಗೆ ಹೊರಟಿದ್ದಾಗ ಜಿಲ್ಲೆಯ ದಕ್ಷಿಣ ಪ್ರದೇಶದ ಕಾಡಿನಲ್ಲಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನಾ ಸ್ಥಳದಿಂದ 12 ನಕ್ಸಲರ ಮೃತದೇಹಗಳನ್ನು ವಶಕ್ಕೆಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಸುಮಾರು 285 ನಕ್ಸಲರು ಹತರಾಗಿದ್ದಾರೆ.
