Homeರಾಷ್ಟ್ರೀಯಸಂಸತ್‌ ಅಧಿವೇಶನ : ಪ್ರಮುಖರೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಸಂಸತ್‌ ಅಧಿವೇಶನ : ಪ್ರಮುಖರೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ

Parliament Session: PM Modi holds important meeting with top leaders

ನವದೆಹಲಿ, ಜು.16-(ಪಿಟಿಐ) ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ಪಕ್ಷದ ಅಧ್ಯಕ್ಷ ನಿತಿನ್‌ ನಬಿನ್‌, ಆರ್‌ಎಸ್‌‍ಎಸ್‌‍ ಪ್ರಮುಖ ಬಿ.ಎಲ್‌.ಸಂತೋಷ್‌ ಸೇರಿದಂತೆ ಬಿಜೆಪಿಯ ಉನ್ನತ ನಾಯಕರ ಜೊತೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ನಿರ್ಣಾಯಕ ಸಭೆ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆಯಿತು ಎಂದು ಮೂಲಗಳು ತಿಳಿಸಿವೆ. ಆದರೆ ಸಭೆಯಲ್ಲಿ ಯಾವ ಮಹತ್ತರ ವಿಷಯ ಚರ್ಚಿಸಲಾಯಿತು ಎಂಬ ಬಗ್ಗೆ ತಿಳಿದುಬಂದಿಲ್ಲ. ಮುಂದಿನ ವಾರ ಆರಂಭವಾಗಲಿರುವ ಸಂಸತ್ತಿನ ಅಧಿವೇಶನಕ್ಕೂ ಮುನ್ನ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್‌‍. ಸಂತೋಷ್‌ ಕೂಡ ಸಭೆಯಲ್ಲಿ ಹಾಜರಿದ್ದರು ಎನ್ನಲಾಗಿದೆ.

ಸಭೆಯಲ್ಲಿ ಏನಾಯಿತು ಎಂಬುದರ ಕುರಿತು ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ತಂಡ ಮತ್ತು ಕೇಂದ್ರ ಸಚಿವ ಸಂಪುಟದಲ್ಲಿ ಪುನರ್ರಚನೆ ಬಗ್ಗೆ ಚರ್ಚೆ ನಡೆಯುತ್ತಿರುವ ನಡುವೆ ಈ ಮಹತ್ವದ ಸಭೆ ನಡೆದಿರುವುದು ವಿಶೇಷವಾಗಿದೆ.

ಸಂಸತ್ತಿನ ಮಳೆಗಾಲದ ಅಧಿವೇಶನ ಜುಲೈ 20 ರಂದು ಪ್ರಾರಂಭವಾಗಿ ಆಗಸ್ಟ್‌ 13 ರಂದು ಮುಕ್ತಾಯಗೊಳ್ಳಲಿದೆ.ಸಂಸತ್ತಿನ ಸದನ ಕಾರ್ಯತಂತ್ರದ ಕುರಿತು ಚರ್ಚಿಸಲು ಜುಲೈ 21 ರಂದು ಎನ್‌ಡಿಎ ಘಟಕಗಳ ಸಭೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

RELATED ARTICLES
spot_img

Latest News