ನವದೆಹಲಿ, ಜೂ.25- ಪ್ರಬಲ ಭೂಕಂಪಗಳಿಂದ ವೆನೆಜುವೆಲಾದಲ್ಲಿ ಸಂಭವಿಸಿದ ಭಾರೀ ಹಾನಿ ಮತ್ತು ಜೀವಹಾನಿ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, ವೆನೆಜುವೆಲಾದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ತೀವ್ರ ದುಃಖವಾಗಿದೆ. ಈ ಸಂಕಷ್ಟದ ಸಮಯದಲ್ಲಿ ಭಾರತವು ವೆನೆಜುವೆಲಾಕ್ಕೆ ಎಲ್ಲ ರೀತಿಯ ಸಹಾಯ ಮಾಡಲು ಸಿದ್ಧವಿದೆ ಎಂದು ಹೇಳಿದ್ದಾರೆ.
ವೆನೆಜುವೆಲಾದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ಉಂಟಾದ ಭಾರೀ ಹಾನಿಯಿಂದ ನನಗೆ ತೀವ್ರ ದುಃಖವಾಗಿದೆ. ಭಾರತದ ಜನರ ಪರವಾಗಿ, ವೆನೆಜುವೆಲಾ ಸರ್ಕಾರ ಮತ್ತು ಜನತೆಗೆ, ವಿಶೇಷವಾಗಿ ತಮ್ಮ ಆತೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆಂದು ತಿಳಿಸಿದ್ದಾರೆ.
ಇದೇ ವೇಳೆ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿರುವ ಪ್ರಧಾನಿ, ಈ ಕಠಿಣ ಸಮಯದಲ್ಲಿ ಭಾರತವು ವೆನೆಜುವೆಲಾ ಜನರೊಂದಿಗೆ ಒಟ್ಟಾಗಿ ನಿಂತಿದ್ದು, ಸಾಧ್ಯವಾದ ಎಲ್ಲ ನೆರವು ನೀಡಲು ಸಿದ್ಧವಿದೆ ಎಂದು ತಿಳಿಸಿದ್ದಾರೆ.
