Thursday, April 16, 2026
Homeರಾಷ್ಟ್ರೀಯಅಜಿತ್‌ ಪವಾರ್‌ ನಿಧನಕ್ಕೆ ಕಂಬನಿ ಮಿಡಿದ ರಾಷ್ಟ್ರಪತಿ ಮುರ್ಮು

ಅಜಿತ್‌ ಪವಾರ್‌ ನಿಧನಕ್ಕೆ ಕಂಬನಿ ಮಿಡಿದ ರಾಷ್ಟ್ರಪತಿ ಮುರ್ಮು

President Murmu condoles death of Ajit Pawar

ನವದೆಹಲಿ, ಜ. 28 (ಪಿಟಿಐ) ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂತಾಪ ಸೂಚಿಸಿದ್ದು, ಅವರ ಅಕಾಲಿಕ ಮರಣವು ಭರಿಸಲಾಗದ ನಷ್ಟ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಅಭಿವೃದ್ಧಿಗೆ, ವಿಶೇಷವಾಗಿ ಸಹಕಾರಿ ವಲಯದಲ್ಲಿ ಪವಾರ್‌ ಅವರ ವಿಶೇಷ ಕೊಡುಗೆಗಾಗಿ ಅವರನ್ನು ಯಾವಾಗಲೂ ಸ್ಮರಿಸಲಾಗುವುದು ಎಂದು ಅವರು ಎಕ್‌್ಸ ಮಾಡಿದ್ದಾರೆ.

ಪುಣೆ ಜಿಲ್ಲೆಯಲಿ ಇಂದು ಬೆಳಿಗ್ಗೆ ಪವಾರ್‌ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ನಂತರ ಪವಾರ್‌ ಮತ್ತು ಇತರ ನಾಲ್ವರು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಶ್ರೀ ಅಜಿತ್‌ ಪವಾರ್‌ ಸೇರಿದಂತೆ ಹಲವಾರು ಜನರು ಸಾವನ್ನಪ್ಪಿದ ಸುದ್ದಿ ಅತ್ಯಂತ ದುರಂತ. ಅಜಿತ್‌ ಪವಾರ್‌ ಅವರ ಅಕಾಲಿಕ ಮರಣವು ಭರಿಸಲಾಗದ ನಷ್ಟವಾಗಿದೆ ಎಂದು ಅವರು ಹಿಂದಿಯಲ್ಲಿ ಅವರು ಪೋಸ್ಟ್‌ ಮಾಡಿದ್ದಾರೆ.

ಮುರ್ಮು ಅವರ ಕುಟುಂಬ, ಬೆಂಬಲಿಗರು ಮತ್ತು ಅಭಿಮಾನಿಗಳಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಇತರ ಎಲ್ಲರ ಕುಟುಂಬಗಳಿಗೆ ಈ ಹೊಡೆತವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದು ರಾಷ್ಟ್ರಪತಿಗಳು ಪ್ರಾರ್ಥಿಸಿದ್ದಾರೆ.

RELATED ARTICLES

Latest News