Homeರಾಷ್ಟ್ರೀಯಭಾರಿ ಚರ್ಚೆಯಾಗುತ್ತಿದೆ ರಾಹುಲ್‌ ವರ್ತನೆ, ಗರ್ಭಿಣಿ ಪತ್ರಕರ್ತೆ ತಳ್ಳಿದ ಆರೋಪ

ಭಾರಿ ಚರ್ಚೆಯಾಗುತ್ತಿದೆ ರಾಹುಲ್‌ ವರ್ತನೆ, ಗರ್ಭಿಣಿ ಪತ್ರಕರ್ತೆ ತಳ್ಳಿದ ಆರೋಪ

ನವದೆಹಲಿ, ಅ.13- ಸುಪ್ರೀಂ ಕೋರ್ಟ್‌ ಮೆರವಣಿಗೆ ಸಂದರ್ಭದಲ್ಲಿ ರಾಹುಲ್‌ಗಾಂಧಿ ಅವರು ಗರ್ಭಿಣಿ ಪತ್ರಕರ್ತೆಯನ್ನು ತಳ್ಳಿದ ಆರೋಪಕ್ಕೆ ಗುರಿಯಾಗಿದ್ದಾರೆ.ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಮತ ಕಳ್ಳತನ ಆರೋಪಗಳನ್ನು ಖಂಡಿಸಿ ವಿರೋಧ ಪಕ್ಷಗಳ ಇಂಡಿ ಮೈತ್ರಿಕೂಟ ದೆಹಲಿಯಲ್ಲಿ ನಡೆಸಿದ ಸುಪ್ರೀಂ ಕೋರ್ಟ್‌ ಮೆರವಣಿಗೆಯ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದ ಮೂರು ತಿಂಗಳ ಗರ್ಭಿಣಿ ಪತ್ರಕರ್ತೆಯನ್ನು ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ತಳ್ಳಿ ಕೆಟ್ಟದಾಗಿ ನಡೆಸಿಕೊಂಡಿದ್ದು, ಆಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕರು ಗಂಭೀರ ಆರೋಪ ಮಾಡಿದ್ದಾರೆ.

ಈ ಆರೋಪಗಳ ಕುರಿತು ರಾಹುಲ್‌ ಗಾಂಧಿ ಅಥವಾ ಕಾಂಗ್ರೆಸ್‌‍ ಪಕ್ಷದಿಂದ ತಕ್ಷಣದ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಬಿಜೆಪಿ ನಾಯಕ ರಾಜೇಶ್‌ ಭಾಟಿಯಾ ಮಾತನಾಡಿ, ರಾತ್ರಿ 8.30ರ ಸುಮಾರಿಗೆ ಪತ್ರಕರ್ತೆಯ ಸಹೋದರಿ ರಾಜಿಂದರ್‌ ನಗರದಲ್ಲಿರುವ ನನ್ನ ಕಚೇರಿಗೆ ಬಂದು ನೆರವು ಕೋರಿದರು. ತಮ್ಮ ಸಹೋದರಿ ಗರ್ಭಿಣಿಯಾಗಿದ್ದು, ಕರ್ತವ್ಯದ ವೇಳೆ ರಾಹುಲ್‌ ಗಾಂಧಿ ಅವರನ್ನು ತಳ್ಳಿದ್ದರಿಂದ ಗಾಯಗೊಂಡಿದ್ದು ಚಿಕಿತ್ಸೆಯ ಅಗತ್ಯವಿದೆ ಎಂದು ತಿಳಿಸಿದರು ಎಂದಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಬಿಜೆಪಿ ಶಾಸಕ ಉಮಾಂಗ್‌ ಬಜಾಜ್‌‍, ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್‌ ಭಂಡಾರಿ ಮತ್ತು ರಾಜೇಶ್‌ ಭಾಟಿಯಾ ಆಸ್ಪತ್ರೆಗೆ ಧಾವಿಸಿ ಪತ್ರಕರ್ತೆಯ ಆರೋಗ್ಯ ವಿಚಾರಿಸಿದರು. ಪತ್ರಕರ್ತೆ ರಿಚಾ ಪರಾಶರ್‌ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ವೀಡಿಯೊವನ್ನು ಪ್ರದೀಪ್‌ ಭಂಡಾರಿ ತಮ್ಮ ಎಕ್‌್ಸ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮೂರು ತಿಂಗಳ ಗರ್ಭಿಣಿಯೊಬ್ಬರು ತನ್ನ ವೃತ್ತಿಪರ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅವರ ಮೇಲೆ ಹಲ್ಲೆ ನಡೆಸಿ ಕೆಳಕ್ಕೆ ಕೆಡವಲಾಗಿದೆ. ಮಹಿಳಾ ಸುರಕ್ಷತೆ ಬಗ್ಗೆ ಭಾಷಣ ಬಿಗಿಯುವ ನಾಯಕರ ಅಸಲಿ ಮುಖವಾಡ ಕಳಚಿಬಿದ್ದಿದೆ ಎಂದು ಅವರು ಕಿಡಿಕಾರಿದ್ದಾರೆ.

RELATED ARTICLES
spot_img

Latest News