Tuesday, April 21, 2026
Homeರಾಷ್ಟ್ರೀಯನೆತ್ಯಾನಹುಗೆ ಕರೆ ಮಾಡಿ ಯುದ್ಧ ನಿಲ್ಲಿಸುವಿನಂತೆ ಮನವಿ ಮಾಡಿದ ಪ್ರಧಾನಿ ಮೋದಿ

ನೆತ್ಯಾನಹುಗೆ ಕರೆ ಮಾಡಿ ಯುದ್ಧ ನಿಲ್ಲಿಸುವಿನಂತೆ ಮನವಿ ಮಾಡಿದ ಪ್ರಧಾನಿ ಮೋದಿ

Safety Of Civilians "Utmost Priority," PM Modi Tells Israeli PM Netanyahu

ನವದೆಹಲಿ, ಮಾ. 2: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇರಾನ್‌ ಮೇಲಿನ ದಾಳಿಯನ್ನು ನಿಲ್ಲಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತ್ಯಾನಹು ಅವರಿಗೆ ದೂರವಾಣಿ ಕರೆ ಮಾಡಿ ಮನವಿ ಮಾಡಿಕೊಂಡಿದ್ದಾರೆ.

ಇಸ್ರೇಲ್‌, ಅಮೆರಿಕ ದಾಳಿಗೆ ಪ್ರತಿಯಾಗಿ ಇರಾನ್‌ ಕ್ಷಿಪಣಿ ದಾಳಿ ಮುಂದುವರಿಸಿರುವ ಹಿನ್ನೆಲೆ ಪ್ರಾದೇಶಿಕ ಭದ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳು ಉದ್ಭವಿಸಿರುವುದಾಗಿ ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಮನವರಿಕೆ ಮಾಡಿಕೊಟ್ಟರು ಎನ್ನಲಾಗಿದೆ.

ನೆತನ್ಯಾಹು ಅವರೊಂದಿಗೆ ತಾವು ನಡೆಸಿದ ಸಂಭಾಷಣೆಯ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಮೋದಿ ಅವರು, ನಾಗರಿಕರ ಸುರಕ್ಷತೆ ಮೊದಲ ಆದ್ಯತೆಯಾಗಿದೆ ಎಂಬುದನ್ನು ಒತ್ತಿ ಹೇಳಿದ್ದೇನೆ. ಯುದ್ಧವನ್ನು ಬೇಗನೆ ನಿಲ್ಲಿಸುವ ಅಗತ್ಯವನ್ನು ಭಾರತ ಪುನರುಚ್ಚರಿಸಿದೆ ಎಂದು ತಿಳಿಸಿದ್ದಾರೆ.

ಏತನ್ಮಧ್ಯೆ, ಇಸ್ರೇಲ್‌ನ ಪ್ರಮುಖ ನಗರಗಳನ್ನು ಗುರಿಯಾಗಿಸಿಕೊಂಡು ಇರಾನ್‌ ಪ್ರತೀಕಾರದ ದಾಳಿ ನಡೆಸಿದೆ. ರಾಜಧಾನಿ ಜೆರುಸಲೇಂ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇಸ್ರೇಲ್‌ ಮೇಲಿನ ಪ್ರತೀಕಾರದ ದಾಳಿ ಮುಂದುವರಿದಿರುವುದರಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ.ಮತ್ತೊಂದೆಡೆ, ಯುನೈಟೆಡ್‌ ಅರಬ್‌ ಎಮಿರೇಟ್‌್ಸ ರಾಷ್ಟ್ರಗಳ ಮೇಲೂ ಇರಾನ್‌ ಸೇನೆಯಿಂದ ದಾಳಿ ನಡೆದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಟೆಹ್ರಾನ್‌ನನಲ್ಲಿ ಇರುವ ತನ್ನ ರಾಯಭಾರ ಕಚೇರಿಯನ್ನು ತಾತ್ಕಾಲಿಕವಾಗಿ ಮುಚ್ಚುವುದಾಗಿ ಯುಎಇ ವಿದೇಶಾಂಗ ಸಚಿವಾಲಯ ಘೋಷಿಸಿದೆ.

ತಕಳೆದ ವಾರವಷ್ಟೇ ಪ್ರಧಾನಿ ಮೋದಿ ಇಸ್ರೇಲ್‌ಗೆ 2 ದಿನಗಳ ಕಾಲ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಇಸ್ರೇಲ್‌ ಹಾಗೂ ಭಾರತ ಮಧ್ಯೆ ಹಲವು ಒಪ್ಪಂದಗಳು ಏರ್ಪಟ್ಟಿದ್ದವು. ಇದೀಗ ಮತ್ತೆ ಇಸ್ರೇಲ್‌ ಪ್ರಧಾನಿಗೆ ಕರೆ ಮಾಡಿ ಮೋದಿ ಮಾತನಾಡಿದ್ದಾರೆ. ಒಟ್ಟಿನಲ್ಲಿ, ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗಾಗಿ ಎಲ್ಲಾ ದೇಶಗಳು ತಾಳ್ಮೆ ಪ್ರದರ್ಶಿಸಿ ಸಂವಾದದ ಮೂಲಕ ಸಮಸ್ಯೆ ಪರಿಹರಿಸಬೇಕು ಎಂಬುದು ಭಾರತದ ನಿಲುವು ಎಂಬುದನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ.

RELATED ARTICLES

Latest News