ಕೇರಳ,ಏ.4- ಮಲ್ಲುಪುರಂ ಜಿಲ್ಲೆಯಲ್ಲಿ ನಿನ್ನೆ ಕಾಂಗ್ರೆಸ್ ಸಂಸದ ಶಶಿತರೂರು ಅವರ ಬೆಂಗಾವಲು ವಾಹನವನ್ನು ತಡೆಹಿಡಿದಿರುವುದಲ್ಲದೆ ಅವರ ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ವಿಡಿಯೋವೊಂದು ಎಕ್‌್ಸ ಖಾತೆಯಲ್ಲಿ ವೈರಲ್ ಆಗಿದೆ. ಶಶಿತರೂರು ಅವರು ವಂಡೂರಿನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ಕೆ ತೆರಳುತ್ತಿದ್ದಾಗ ತಿರುವಳ್ಳಿ ಚೆಲ್ಲಿತೋಡು ಸೇತುವೆ ಬಳಿ ಬೆಂಗಾವಲು ಪಡೆಯನ್ನು ತಡೆಯಲಾಯಿತು.
ಭದ್ರತಾ ಸಿಬ್ಬಂದಿ ನೀಡಿದ ದೂರಿನ ಆಧಾರದ ಮೇಲೆ ವಂಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂವರನ್ನು ಬಂಧಿಸಿ, ಎರಡು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾಳಿಮಾವು ಮೂಲದ ಹುಮಾರ ಎಂಬ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಕೇರಳದಲ್ಲಿ ಏ.9 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 4 ರಂದು ಮತ ಎಣಿಕೆ ನಡೆಯಲಿದೆ. ಎಲ್‌ಡಿಎಫ್, ಯೂಡಿಎಫ್ ಪಕ್ಷಗಳು ಭರ್ಜರಿ ಪ್ರಚಾರ ನಡೆಸಿವೆ.
