ಲಕ್ನೋ, ಡಿ.31 ಉತ್ತರ ಪ್ರದೇಶದ ಸಂತ ಕಬೀರ್ ನಗರದಲ್ಲಿ ತಂದೆಯೊಬ್ಬ ತನ್ನ 13 ವರ್ಷದ ಮಲಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ.ಅತ್ಯಾಚಾರ ಆರೋಪದ ಮೇಲೆ 35 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ 5 ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ತನ್ನ ಮಗಳ ಮೇಲೆ ಮಲತಂದೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳಾ ಕಾನ್‌ಸ್ಟೆಬಲ್ ದೂರು ದಾಖಲಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಶೀಲ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಬಾಲಕಿ ತನ್ನ ಅತ್ಯಾಚಾರವನ್ನು ಶಿಕ್ಷಕರಿಗೆ ತಿಳಿಸಿದಾಗ ವಿಷಯ ಬೆಳಕಿಗೆ ಬಂದಿದೆ.ದೂರಿನ ಆಧಾರದ ಮೇಲೆ, ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ಸೆಕ್ಷನ್ 65(1) (ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿಂಗ್ ಹೇಳಿದರು.
