Homeರಾಷ್ಟ್ರೀಯಕಾವೇರಿ ನೀರು ಬಿಡುವಂತೆ ತಮಿಳುನಾಡು ಸಲ್ಲಿಸಿದ್ದ 2 ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ

ಕಾವೇರಿ ನೀರು ಬಿಡುವಂತೆ ತಮಿಳುನಾಡು ಸಲ್ಲಿಸಿದ್ದ 2 ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ

ಬೆಂಗಳೂರು, ನ.20- ಕಾವೇರಿ ನೀರು ಬಿಡುವಂತೆ ತಮಿಳು ನಾಡು ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ, ಈ ತೀರ್ಪಿನ ಅಂಶಗಳ ಜೊತೆಗೆ ಆ ರಾಜ್ಯದ ನಾಯಕರಿಗೆ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಲು ಪ್ರಯತ್ನಿಸುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕುಡಿಯುವ ನೀರಿಗೂ ಅಭಾವವಿದೆ. ನಮಗೆ ನೀರಿಲ್ಲ ಎಂದ ಮೇಲೆ ತಮಿಳುನಾಡಿಗೆ ಎಲ್ಲಿಂದ ಬಿಡಲು ಸಾಧ್ಯ ಎಂದರು ಪ್ರಶ್ನಿಸಿದರು.ನಮ ರಾಜ್ಯದ ಜನರನ್ನು ರಕ್ಷಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ. ರೈತರಿಗೆ ಈ ಬಾರಿ ಬೆಳೆ ಬೆಳೆಯದಂತೆ ಮೊದಲೇ ಸೂಚನೆ ನೀಡಲಾಗಿತ್ತು. ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಎಂದರೆ ಈ ಬಾರಿ ಕೆಆರ್‌ಎಸ್‌‍ ಗೆ ಬಾಗಿನ ಅರ್ಪಿಸಲು ಸಾಧ್ಯವಾಗಿಲ್ಲ. ಇವೆಲ್ಲವೂ ವಾಸ್ತವ ಸಂಗತಿಗಳು ಎಂದರು.

ನೀರಿನ ಅಭಾವ ಇರುವುದು ತಮಿಳುನಾಡು ಸರ್ಕಾರಕ್ಕೂ ವಾಸ್ತವದ ಅರಿವಿದೆ. ನ್ಯಾಯಾಲಯದ ತೀರ್ಪಿನಲ್ಲಿರುವ ಅಂಶಗಳನ್ನು ಆಧರಿಸಿ, ತಮಿಳುನಾಡಿನಲಿ ಟೀಕೆ ಮಾಡುವ ನಮ ಪಕ್ಷದ ಅಧ್ಯಕ್ಷರು ಸೇರಿದಂತೆ ಇತರರಿಗೆ ಮನವರಿಕೆ ಮಾಡಿಕೊಡುತ್ತೇನೆ ಎಂದು ಹೇಳಿದುರ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಎಲ್ಲೆಲ್ಲಿ ಎಷ್ಟೆಷ್ಟು ನೀರಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಇಂತಹ ಪರಿಸ್ಥಿತಿಯಲ್ಲಿಯೂ ಕೆಲವರು ಅನಗತ್ಯವಾಗಿ ಮಾತನಾಡುತ್ತಿರುವುದು ಬೇಸರ ತಂದಿದೆ ಎಂದರು. ಬಸವ ಮಂಟಪ ಕೃತಿ ವಿವಾದ ಕುರಿತು ಮಾತನಾಡಿದ ಮುಖ್ಯಮಂತ್ರಿಯವರು, ಕರ್ನಾಟಕ ಸರ್ಕಾರ ಬಸವಣ್ಣನವರನ್ನು ನಾಡಿನ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಅವರ ತತ್ವ ಮತ್ತು ಆದರ್ಶಗಳನ್ನು ಆಡಳಿತದಲ್ಲಿ ಅಳವಡಿಸಿಕೊಂಡಿದೆ.

ಬಸವಣ್ಣ ರಾಜ್ಯಕ್ಕಷ್ಟೆ ಅಲ್ಲ, ದೇಶಕ್ಕೇ ಮಾದರಿಯಾಗಿದ್ದಾರೆ. ದೆಹಲಿಯಲ್ಲಿಯೂ ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಅವರ ವಿಚಾರಧಾರೆಗಳನ್ನು ಪರಿಚಯಿಸಲಾಗುತ್ತಿದೆ. ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳಲ್ಲಿ ಅವರ ಭಾವಚಿತ್ರ ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದರು. ಇಂತಹ ಸಂದರ್ಭದಲ್ಲಿ ಜಾತಿ ಮತ್ತು ಧರ್ಮದ ವಿಚಾರಗಳನ್ನು ಮುಂದಿಟ್ಟುಕೊಂಡು ಕೆಲವು ಮಾಧ್ಯಮಗಳು ಹಾಗೂ ವ್ಯಕ್ತಿಗಳು ಸಮಾಜದ ಸಾಮರಸ್ಯ ಕದಡುವ ಪ್ರಯತ್ನ ಮಾಡುತ್ತಿರುವುದು ಸರಿಯಲ್ಲ. ಸಮಾಜದಲ್ಲಿ ವೈಷಮ್ಯ ಹುಟ್ಟುಹಾಕುವ ಕಿಡಿಗೇಡಿತನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.

ಬಸವ ಸಮಿತಿಯ ದೂರಿನ ಹಿನ್ನೆಲೆಯಲ್ಲಿ ಸಚಿವ ಸಂಪುಟದಲ್ಲಿ ಚರ್ಚಿಸಿ, ವಿವಾದಿತ ಬಸವ ಮಂಟಪ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಲು ನಿರ್ಧರಿಸಲಾಗಿದೆ. ಈ ವಿವಾದದ ಹಿಂದೆ ಇರುವವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನಿಸಿದೆ ಎಂದರು.

ವಿವಾದಿತ ಪುಸ್ತಕದ ಅಂಶಗಳಿಂದ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದು ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇತ್ತು. ವಿವಿಧ ಪಕ್ಷಗಳ ಮುಖಂಡರು ಕೂಡ ತಮೊಂದಿಗೆ ಚರ್ಚಿಸಿ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ಸಚಿವ ಸಂಪುಟದಲ್ಲಿ ಪುಸ್ತಕ ಮುಟ್ಟುಗೋಲು ಹಾಕಿಕೊಳ್ಳುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅನಿರೀಕ್ಷಿತವಾಗಿ ಎದುರಾಗಿರುವ ಹಿನ್ನೆಲೆಯಲ್ಲಿ ಪಕ್ಷದ ಸಚಿವರೊಂದಿಗೆ ಔಪಚಾರಿಕವಾಗಿ ಚರ್ಚೆ ನಡೆಸಲಾಗಿದೆ. ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಅಗತ್ಯವಿರುವ ಕಾರ್ಯತಂತ್ರಗಳ ಕುರಿತು ಸಮಾಲೋಚನೆ ನಡೆಸಲಾಗುತ್ತಿದೆ ಎಂದರು.

ಜೆಡಿಎಸ್‌‍ ನ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಪಕ್ಷದ ಅಭ್ಯರ್ಥಿ ಕಣಕ್ಕಿಳಿಸುವ ಕುರಿತು ಚರ್ಚೆ ಮಾಡಿರುವುದಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದರು. ನನಗೆ ನಮ ಪಕ್ಷದ ಜವಾಬ್ದಾರಿಯೇ ಹೆಚ್ಚಾಗಿದೆ. ಅನ್ಯ ಪಕ್ಷಗಳ ಬಗ್ಗೆ ಮಾತನಾಡುವುದಿಲ್ಲ ಎಂದರು.

ನಿನ್ನೆ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಆಶಾ ಕಾರ್ಯಕರ್ತೆಯರೊಂದಿಗೆ ಸಭೆ ನಡೆಸಲಾಗಿದೆ. ಇನ್ನು ಗಂಗಾ ಅಧಿಕೃತ ನಿವಾಸದಲ್ಲಿ ರಾಜ್ಯದ 224 ಶಾಸಕರಿಗೂ ಭೋಜನಕೂಟಕ್ಕೆ ಆಹ್ವಾನ ನೀಡಲಾಗಿತ್ತು. ನಾನು ಕೇವಲ ಕಾಂಗ್ರೆಸ್‌‍ ಶಾಸಕರಿಗೆ ಮಾತ್ರ ಮುಖ್ಯಮಂತ್ರಿಯಲ್ಲ. ಎಲ್ಲ ಪಕ್ಷಗಳ ಶಾಸಕರಿಗೂ ಮುಖ್ಯಮಂತ್ರಿಯಾಗಿದ್ದೇನೆ. ಈ ಹಿನ್ನೆಲೆಯಲ್ಲಿ ಪಕ್ಷಾತೀತವಾಗಿ ಎಲ್ಲ ಶಾಸಕರಿಗೂ ಆಹ್ವಾನ ನೀಡಲಾಗಿತ್ತು ಎಂದು ಮುಖ್ಯಮಂತ್ರಿ ತಿಳಿಸಿದರು.

RELATED ARTICLES

Latest News