Saturday, April 11, 2026
Homeರಾಷ್ಟ್ರೀಯಕೇರಳ : ರಸ್ತೆ ಅಪಘಾತದಲ್ಲಿ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

ಕೇರಳ : ರಸ್ತೆ ಅಪಘಾತದಲ್ಲಿ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Three MBBS students of Malabar Medical College killed in tragic road accident in Kerala

ಕೋಝಿಕ್ಕೋಡ್‌ (ಕೇರಳ),ಮಾ.18-ಕೊಯ್ಲಾಂಡಿ ಬಳಿ ಇಂದು ಮುಂಜಾನೆ ದ್ವಿಚಕ್ರವೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ಬೆಳಗಿನ ಜಾವ 2 ಗಂಟೆ ಸುಮಾರಿಗೆ ಮೂವರು ಪ್ರಯಾಣಿಸುತ್ತಿದ್ದ ಸ್ಕೂಟರ್‌ ರಸ್ತೆ ಪಕ್ಕದ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಕೊಯ್ಲಾಂಡಿ ಪೊಲೀಸ್‌‍ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರನ್ನು ಸುಮಾರು 19 ವರ್ಷ ವಯಸ್ಸಿನ ಮೂವರು ಮಲಬಾರ್‌ ಕ್ರಿಶ್ಚಿಯನ್‌ ಕಾಲೇಜಿನ ಎಂಬಿಬಿಎಸ್‌‍ ವಿದ್ಯಾರ್ಥಿಗಳು ಎಂದು ಅಧಿಕಾರಿ ತಿಳಿಸಿದ್ದಾರೆ. ಅಪಘಾತದ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ,ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

RELATED ARTICLES

Latest News