ಬಿಹಾರ, ಜ. 13: ಒಂದು ವರ್ಷದ ಹಿಂದಷ್ಟೇ ಅಪಘಾತದಲ್ಲಿ ಪತಿಯನ್ನು ಕಳೆದುಕೊಂಡಿದ್ದ ಆರ್ಕೆಸ್ಟ್ರಾ ನೃತ್ಯಗಾರ್ತಿಯನ್ನು ಕಾಮುಕರು ಅಪಹರಿಸಿ ಅತ್ಯಾಚಾರವೆಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ.
24 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಕುಡಿದ ಮತ್ತಿನಲ್ಲಿದ್ದ ಆರೋಪಿಯೊಬ್ಬನ ಫೋನ್ ಬಳಸಿ ಯುವತಿ ಪೊಲೀಸರಿಗೆ ಕರೆ ಮಾಡಿ ರಕ್ಷಣೆ ಕೋರಿದ್ದಾಳೆ.ಇದರಿಂದಾಗಿ ಆಕೆಯ ರಕ್ಷಣೆ ಮತ್ತು ಆರು ಆರೋಪಿಗಳಲ್ಲಿ ಒಬ್ಬನ ಬಂಧಿಸಲಾಗಿದೆ.
ರಾತ್ರಿ 9 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದ ಇಬ್ಬರು ಪುರುಷರು ಆಕೆಯನ್ನು ಅಪಹರಿಸಿ ಸುಮಾರು 25 ಕಿ.ಮೀ ದೂರದ ಗೋಡೌನ್‌ಗೆ ಕರೆದೊಯ್ದಿದ್ದಾರೆ ಆಗಾಗಲೇ ಅಲ್ಲಿದ್ದ ಇತರೆ ನಾಲ್ವರು ಪುರುಷರು ಬಲವಂತವಾಗಿ ಮದ್ಯ ಸೇವಿಸಿ ನೃತ್ಯ ಮಾಡಿಸಿದ್ದಾರೆ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ.
ನಂತರ ಆರು ಪುರುಷರು ಒಬ್ಬರ ನಂತರ ಒಬ್ಬರು ಅತ್ಯಾಚಾರ ಎಸಗಿದ್ದಾರೆ. ಹಲ್ಲೆಯ ನಂತರ, ಐವರು ಪುರುಷರು ಆಕೆಯನ್ನು ಕೋಣೆಯೊಳಗೆ ಕೂಡಿಹಾಕಿ ಪರಾರಿಯಾಗಿದ್ದಾರೆ. ಆದರೆ, ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಒಳಗೆ ಮಲಗಿದ್ದ ಪರಿಸ್ಥಿತಿಯ ಲಾಭ ಪಡೆದುಕೊಂಡ ಮಹಿಳೆ, ಮಲಗಿದ್ದ ವ್ಯಕ್ತಿಯ ಫೋನ್ ಬಳಸಿ, ಮಧ್ಯರಾತ್ರಿ 12.15 ರ ಸುಮಾರಿಗೆ ತುರ್ತು ಸಂಖ್ಯೆ 112 ಗೆ ಕರೆ ಮಾಡಿ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.
ತುರ್ತು ಕರೆ ಬಂದ ಕೂಡಲೇ ಪೊಲೀಸರು ಸ್ಥಳಕ್ಕೆ ತಲುಪಿದರು ಹೊರಗಿನಿಂದ ಬಾಗಿಲು ಲಾಕ್ ಮಾಡಲಾಗಿತ್ತು ಆಗ ಪೊಲೀಸ್ ಸಿಬ್ಬಂದಿ ಗೋಡೌನ್‌ಬಾಗಿಲು ಒಡೆಯಬೇಕಾಯಿತು.
ಸಂತ್ರಸ್ತೆ ಒಳಗೆ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮದ್ಯದ ಬಾಟಲಿಗಳು ಕೋಣೆಯಲ್ಲಿ ಹರಡಿಕೊಂಡಿದ್ದವು. ಅಲ್ಲಿ ಒಬ್ಬ ವ್ಯಕ್ತಿ ಕುಡಿದ ಮತ್ತಿನಲ್ಲಿ ಬಿದ್ದಿರುವುದು ಕಂಡುಬಂದಿದೆ.
ಗಾಯಗೊಂಡ ಮಹಿಳೆಯನ್ನು ಪೂರ್ಣಿಯಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಆಕೆಯ ಹೇಳಿಕೆಯನ್ನು ದಾಖಲಿಸಲಾಗಿದೆ. ಪ್ರಸ್ತುತ ಆಕೆಯ ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಯನ್ನು ಸ್ಥಳೀಯ ನಿವಾಸಿ ಮೊಹಮ್ಮದ್ ಜುನೈದ್ (35) ಎಂದು ಗುರುತಿಸಲಾಗಿದ್ದು, ಅಪರಾಧಕ್ಕೆ ಬಳಸಲಾಗಿದೆ ಎನ್ನಲಾದ ಕಾರನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ಹೇಳಿಕೆಯ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಹೊರತಾಗಿ, ಯುವತಿ ಇತರ ಇಬ್ಬರ ಹೆಸರನ್ನು ಹೆಸರಿಸಿದ್ದಾರೆ ಎಂದುಪೊಲೀಸರು ಹೇಳಿದರು.ಆರೋಪಿಗಳ ತನಿಖೆ ಮತ್ತು ವಿಚಾರಣೆಯ ಸಮಯದಲ್ಲಿ, ಮಾನವ ಕಳ್ಳಸಾಗಣೆಗೆ ಸಂಬಂಧಿಸಿದ ಸಂಗತಿಗಳು ಸಹ ತಿಳಿದುಬಂದಿದೆ. ಸಂತ್ರಸ್ತೆಯ ಪತಿ ಒಂದು ವರ್ಷದ ಹಿಂದೆ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದರು ಮತ್ತು ಅವರು ಒಂಟಿಯಾಗಿ ವಾಸಿಸುತ್ತಿದ್ದಾರೆ.
