ಬೆಂಗಳೂರು,ಜ.9- ಮೂವತ್ತೈದನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಜ.13ರಂದು ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ರ‍್ಯಾಲಿ ಹಮ್ಮಿಕೊಳ್ಳಲಾಗಿದ್ದು, ಸುಮಾರು 25ರಿಂದ 35 ಸಾವಿರ ಶಾಲಾ ಮಕ್ಕಳು ಪಾಲ್ಗೊಳ್ಳಲಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಜ.11ರಿಂದ 17ರವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ನಡೆಸುತ್ತಿದೆ. ಅದರಂತೆ ಬೆಂಗಳೂರಿನಲ್ಲಿ ಜ.13ರಿಂದ 19ರವರೆಗೆ ನಡೆಸಲು ತೀರ್ಮಾನಿಸ ಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮವನ್ನು ಜ.13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ. ಸ್ಟೂಡೆಂಟ್ ಅಸೋಸಿಯೇಷನ್ ಫಾರ್ ರೋಡ್ ಸೇಫ್ಟಿ(ಎಸ್‍ಎಆರ್‍ಎಸ್) ಯೋಜನೆಯಡಿ ಸಂಚಾರಿ ವಿಭಾಗದ ಪೊಲೀಸರು ನಗರದ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳಿಗೆ ಸಂಚಾರ ಸುರಕ್ಷತೆ ಮತ್ತು ಸಂಚಾರಿ ನಿಯಮಗಳ ಬಗ್ಗೆ ತರಬೇತಿ ನೀಡಲಿದ್ದಾರೆ. ತರಬೇತಿ ಪಡೆದ ವಿದ್ಯಾರ್ಥಿಗಳು ಜ.13ರಂದು ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಲೋಕಸಭೆ ಚುನಾವಣೆ : 10 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಪ್ಲಾನ್
ಮಾನವ ಕಳ್ಳ ಸಾಗಾಣಿಕೆ ಮತ್ತು ವೇಶ್ಯಾವಾಟಿಕೆಯಂತಹ ಕೃತ್ಯಗಳು ಭಯೋತ್ಪಾದನೆಗಿಂತ ಹೀನವಾದುದು. ಜೀವನ ಪರ್ಯಂತ ಮಾನಸಿಕ ಮತ್ತು ದೈಹಿಕವಾಗಿ ಅವರನ್ನು ಆಘಾತಕ್ಕೆ ತಳ್ಳುತ್ತದೆ ಜೊತೆಗೆ ಆತ್ಮಗೌರವಕ್ಕೆ ಧಕ್ಕೆ ತರುವಂತಾಗಿದೆ. ಇಂಥ ಕೃತ್ಯಗಳನ್ನು ಗಂಭೀರವಾಗಿ ಪರಿಗಣಿಸಿ ಇದರ ವಿರುದ್ಧ ಸಮರ ಸಾರಿದ್ದೇವೆ ಎಂದರು.
ಈ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ಮತ್ತು ನಗರ ಪೊಲೀಸರು ನಗರದಲ್ಲಿನ ಸ್ಪಾ ಕೇಂದ್ರಗಳ ಮೇಲೆ ನಿಗಾ ಇಟ್ಟಿದ್ದು, ಈ ರೀತಿಯ ಜಾಲಗಳನ್ನು ಪತ್ತೆಹಚ್ಚಲಾಗುವುದು ಎಂದು ಹೇಳಿದರು.
ನಗರದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಮ್ ಪ್ರಕರಣಗಳನ್ನು ಬೇಧಿಸಲು ವಿಶೇಷ ನಾಲ್ಕು ಎಸ್‍ಐಟಿ ತಂಡಗಳನ್ನು ರಚಿಸಲಾಗಿದ್ದು, ಒಂದು ತಂಡ ಫೆಡೆಕ್ಸ್ ಕೊರಿಯರ್ ಜಾಲವನ್ನು ಬೇಧಿಸಿದೆ. ಇದು ದೇಶದಲ್ಲೇ ಪ್ರಮುಖ ಸೈಬರ್ ಅಪರಾಧಗಳಲ್ಲೊಂದಾಗಿದೆ. ಈ ಮೂಲಕ ಸೈಬರ್ ಕ್ರೈಂ ವಿರುದ್ಧದ ಸಮರಕ್ಕೆ ನಮ್ಮ ಮೊದಲ ಯಶಸ್ವಿ ಸಿಕ್ಕಂತಾಗಿದೆ ಎಂದು ಆಯುಕ್ತರು ತಿಳಿಸಿದರು.