ಜೇಡಿಮಣ್ಣು ಅಥವಾ ಆವೆಮಣ್ಣಿನಿಂದ ಮೂರ್ತಿಯನ್ನು ತಯಾರಿಸಬೇಕು ಎಂಬ ಶಾಸ್ತ್ರವಿಯಿಂದ. ಜತೆಗೆ ಮಣ್ಣಿನ ಗಣಪತಿ ಪೂಜೆಗೆ ವೈಜ್ಞಾನಿಕ ಕಾರಣವೂ ಇಲ್ಲದೆ ಇಲ್ಲ. ಇದನ್ನು ಅರಿತು ಪೂಜಿಸಲು ಮುಂದಾಗಬೇಕಿದೆ. ಶ್ರೀ ಗಣೇಶನ ಮೂರ್ತಿಯನ್ನು ಜೇಡಿಮಣ್ಣಿನಿಂದ ಅಥವಾ ಆವೆಮಣ್ಣಿನಿಂದ ತಯಾರಿಸಬೇಕು. ಇತ್ತೀಚೆಗೆ ಭಾರ ಕಡಿಮೆಯಾಗಲು ಮತ್ತು ಅದು ಹೆಚ್ಚು ಆಕರ್ಷಕವಾಗಿ ಕಾಣಿಸಬೇಕೆಂದು ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ಮೂರ್ತಿಗಳನ್ನು ತಯಾರಿಸಲಾಗುತ್ತದೆ.
ಮಣ್ಣಿನ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್‍ನ ಗಣೇಶ ಮೂರ್ತಿಯಲ್ಲಿ ವ್ಯತ್ಯಾಸವಿದೆ. ಪಾರ್ವತಿ ತಯಾರಿಸಿದ ಶ್ರೀ ಗಣೇಶನು ಮಹಾಗಣಪತಿಯ ಅವತಾರವಾಗಿದ್ದಾನೆ. ಪಾರ್ವತಿ ಮೃತ್ತಿಕೆಯ (ಮಣ್ಣಿನ) ಆಕಾರ ಮಾಡಿ ಅದರಲ್ಲಿ ಶ್ರೀ ಗಣೇಶನ ಆವಾಹನೆ ಮಾಡಿದಳು. (ಪುರಾಣದಲ್ಲಿ ಶ್ರೀ ಗಣೇಶನು ಮಣ್ಣಿನಿಂದ ನಿರ್ಮಾಣವಾಗಿದ್ದಾನೆ ಎಂದು ಹೇಳಲಾಗಿದೆ) ಭಾದ್ರಪದ ಶುಕ್ಲ ಚತುರ್ಥಿಯಂದು ಮಣ್ಣಿನ ಗಣೇಶಮೂರ್ತಿಯನ್ನು ತಯಾರಿಸಬೇಕು ಎಂದು ಶಾಸ್ತ್ರವಿಯಿದೆ.
ಮಣ್ಣಿನ ಮೂರ್ತಿಯ ಲಾಭ: ಮಣ್ಣಿನ ಮೂರ್ತಿಯಲ್ಲಿ ಶ್ರೀ ಗಣೇಶನ ಪವಿತ್ರಕಗಳು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸಿ ಕಾರ್ಯ ನಿರತವಾಗಿರುತ್ತವೆ. ಮಣ್ಣಿನಲ್ಲಿರುವ ಪೃಥ್ವಿತತ್ತ್ವದಿಂದಾಗಿ ಮೂರ್ತಿ ಬ್ರಹ್ಮಾಂಡ ಮಂಡಲದಿಂದ ಆಕರ್ಷಿಸಿದ ದೇವತೆಯ ತತ್ತ್ವವು ಮೂರ್ತಿಯಲ್ಲಿ ದೀರ್ಘಕಾಲ ಕಾರ್ಯನಿರತವಾಗಿರುತ್ತದೆ. ಪ್ಲಾಸ್ಟರ್ ಆಫ್ ಪ್ಯಾರಿಸ್‍ನ ಮೂರ್ತಿಯಲ್ಲಿ ದೇವತೆಯ ತತ್ವವನ್ನು ಆಕರ್ಷಿಸುವ ಮತ್ತು ಕಾರ್ಯನಿರತವಾಗಿಡುವ ಕ್ಷಮತೆ ಕಡಿಮೆಯಿರುವುದರಿಂದ ಇಂತಹ ಮೂರ್ತಿಯಿಂದ ಆಧ್ಯಾತ್ಮಿಕ ಸ್ತರದಲ್ಲಿ ಹೆಚ್ಚೇನೂ ಲಾಭವಿಲ್ಲ.
ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ಅದು ಕೂಡಲೇ ನೀರಿನಲ್ಲಿ ಕರಗಿ, ಹರಿಯುವ ನೀರಿನಿಂದ ಸುತ್ತ ಮುತ್ತಲಿನ ಪರಿಸರದಲ್ಲಿ ದೂರದವರೆಗೆ ದೇವತೆಗಳ ಸಾತ್ವಿಕ ಲಹರಿಗಳನ್ನು ಕಡಿಮೆ ಕಾಲಾವಯಲ್ಲಿ ಪ್ರಕ್ಷೇಪಿಸುತ್ತದೆ. ಇದರಿಂದ ಸಂಪೂರ್ಣ ಪರಿಸರದ ವಾಯು ಮಂಡಲ ಶುದ್ಧವಾಗುತ್ತದೆ. ಈ ಪ್ರಕ್ರಿಯೆ ಸಮಷ್ಟಿ ಸ್ತರಕ್ಕೆ ಲಾಭ.
ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಯಿಂದಾಗುವ ಹಾನಿ: ಪ್ಲಾಸ್ಟರ್ ಆಫ್ ಪ್ಯಾರಿಸ್ ನೀರಿನಲ್ಲಿ ಸಹಜವಾಗಿ ಕರಗದಿರುವುದರಿಂದ ವಿಸರ್ಜನೆಯ ನಂತರ ಮೂರ್ತಿ ನೀರಿನ ಮೇಲೆ ತೇಲುತ್ತದೆ. ಅನೇಕ ಕಡೆಗಳಲ್ಲಿ ಮೂರ್ತಿಗಳ ಅವಶೇಷಗಳನ್ನು ಕೆಲವೊಮ್ಮೆ ಒಟ್ಟು ಮಾಡಿ ಅವುಗಳ ಮೇಲೆ ಬುಲ್ಡೋಜರ್‍ಗಳನ್ನು ಚಲಾಯಿಸಲಾಗುತ್ತದೆ. ಹೀಗೆ ಮಾಡುವುದು ಶ್ರೀ ಗಣಪತಿಯ ಘೋರ ವಿಡಂಬನೆಯೇ ಆಗಿದೆ. ಯಾವ ಸನ್ಮಾನದಿಂದ ನಾವು ಶ್ರೀ ಗಣಪತಿಯನ್ನು ಆವಾಹನೆ ಮಾಡುತ್ತೇವೆಯೋ, ಅದೇ ಸನ್ಮಾನದಿಂದ ಅವನನ್ನು ಬೀಳ್ಕೊಡುವುದೂ ಆವಶ್ಯಕ.
ಬೇರೆ ವಸ್ತುಗಳಿಂದ ಮೂರ್ತಿ ತಯಾರಿಸುವುದು ಧರ್ಮಶಾಸ್ತ್ರಕ್ಕೆ ವಿರುದ್ಧ: ಇತ್ತೀಚೆಗೆ ತೆಂಗಿನಕಾಯಿ, ಬಾಳೆಹಣ್ಣು, ಅಡಿಕೆ, ನಾಣ್ಯ, ಸಿರಿಂಜ ಮುಂತಾದ ವಸ್ತುಗಳಿಂದಲೂ ಶ್ರೀ ಗಣೇಶಮೂರ್ತಿ ತಯಾರಿಸುತ್ತಾರೆ. ಇಂತಹ ವಸ್ತುಗಳಿಂದ ಮೂರ್ತಿ ತಯಾರಿಸುವುದು ಧರ್ಮಶಾಸ್ತ್ರಕ್ಕೆ ವಿರುದ್ಧ.
ಇಕೋ ಫ್ರೆಂಡ್ಲಿ ಗಣೇಶಮೂರ್ತಿಗಳ ಬಗೆಗಿನ ವಂಚನೆಯಿಂದ ಎಚ್ಚರ: ಇತ್ತೀಚೆಗೆ ಕೆಲವು ಸಂಸ್ಥೆಗಳು ಇಕೋ-ಫ್ರೆಂಡ್ಲಿ (ಇಕಾಲಾಜಿಕಲ್ ಫ್ರೆಂಡ್ಲಿ, ಅಂದರೆ ಪರಿಸರ ಸ್ನೇಹಿ) ಗಣೇಶಮೂರ್ತಿಗಳನ್ನು ತಯಾರಿಸಲು ಆಹ್ವಾನಿಸುತ್ತಾರೆ. ಅವುಗಳಲ್ಲಿ ಕೆಲವು ಮೂರ್ತಿಗಳನ್ನು ಕಾಗದದ ಮುದ್ದಾಗಳಿಂದ ತಯಾರಿಸಲಾಗುತ್ತದೆ. ಇದು ಅಶಾಸ್ತ್ರೀಯವಂತೂ ಆಗಿದೆ.
ಹಾಗೆಯೇ ಪರಿಸರಕ್ಕೆ ಹಾನಿಕರಕ. ಏಕೆಂದರೆ ಕಾಗದದ ಮುದ್ದಾಗಳು ನೀರಿನಲ್ಲಿರುವ ಪ್ರಾಣವಾಯುವನ್ನು ಹೀರುತ್ತವೆ ಮತ್ತು ಜೀವಗಳಿಗೆ ಹಾನಿಕರವಾದ ಮಿಥೇನ್ ವಾಯುವನ್ನು ನಿರ್ಮಿಸುತ್ತವೆ. ಹಿಂದೂ ಧರ್ಮಶಾಸ್ತ್ರವು ನಿಸರ್ಗದ ರಕ್ಷಣೆಯೊಂದಿಗೆ ಮಾನವನ ಸರ್ವಾಂಗೀಣ ಉನ್ನತಿಯ ವಿಚಾರವನ್ನೂ ಮಾಡಿರುತ್ತದೆ ಎಂಬುದನ್ನು ಗಮನದಲ್ಲಿಡಿ.
ಧರ್ಮಶಾಸ್ತ್ರಕ್ಕನುಸಾರ ತರಬೇಕಾದ ಜೇಡಿಮಣ್ಣಿನ ಮೂರ್ತಿ ದುಬಾರಿಯಾಗಿದೆ. ಈ ರೀತಿ ಹೇಳುವುದು ಕುಂಟು ನೆಪವಾಗಿದೆ. ಪ್ರತಿಯೊಂದು ಕುಟುಂಬದಲ್ಲಿ ಗಣೇಶೋತ್ಸವಕ್ಕಾಗಿ ಆಗುವ ಒಟ್ಟು ಖರ್ಚಿನಲ್ಲಿ (ಉದಾ.ಆಧುನಿಕ ಅಲಂಕಾರ, ಕುಟುಂಬದವರಿಗೆ ಬಟ್ಟೆಗಳ ಖರೀದಿ ಇತ್ಯಾದಿ) ಮೂರ್ತಿಯ ಖರೀದಿಗಾಗಿ ಆಗುವ ಖರ್ಚು ಅತ್ಯಲ್ಪವಾಗಿರುತ್ತದೆ. ಶ್ರೀ ಗಣೇಶನನ್ನು ಪೂಜಿಸುವ ಉದ್ದೇಶ ಕುಟುಂಬ ಸದಸ್ಯರಿಗೆ ಗಣೇಶತತ್ತ್ವ ಸಿಗುವುದಾಗಿದೆ. ಪ್ಲಾಸ್ಟರ್ ಆಫ್ ಪ್ಯಾರಿಸïನ ಮೂರ್ತಿಯಿಂದ ಈ ಲಾಭ ಸಿಗುವುದು ಸಾಧ್ಯವಿಲ್ಲ.
ಸಂಗ್ರಹ: ವಿನೋದ ಕಾಮತ್