ಬೆಂಗಳೂರು,ಜು.19- ಹಿಂದೂ ಮತ್ತು ಮುಸ್ಲಿಮರ ನಡುವೆ ಐಕ್ಯತಾ ಮನೋಭಾವ ಮೂಡಿಸಲು ರಾಜ್ಯಾದ್ಯಂತ ಶೀಘ್ರದಲ್ಲೇ ನವರಸ ಉತ್ಸವ ಕಾರ್ಯಕ್ರಮವನ್ನು ಪ್ರಾರಂಭಿಸುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ವಿಧಾನಪರಿಷತ್‌ನಲ್ಲಿ ಪ್ರಕಾಶ್ ರಾಥೋಡ್ ಅವರು, ಅದಿಲ್ ಶಾ ಅವರ ಕಾಲದಲ್ಲಿ ಕಲೆ ಮತ್ತು ಸಂಸ್ಕೃತಿಯನ್ನು ಪ್ರೋತ್ಸಾಹಿಸಿ ಹಿಂದೂ ಮುಸ್ಲಿಂ ಸೇರಿದಂತೆ ಎಲ್ಲಾ ಧರ್ಮಗಳ ನಡುವೆ ಸಮನ್ವಯತೆ ಸಾಧಿಸಲು ಈ ನೃತ್ಯೋತ್ಸವವನ್ನು ಆರಂಭಿಸುತ್ತಿದ್ದರು. ಸರ್ಕಾರ ಇದನ್ನು ಪುನರಾರಂಭಿಸಬೇಕೆಂದು ಮನವಿ ಮಾಡಿದರು.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹಿಂದೂ ಮುಸ್ಲಿಂ ನಡುವೆ ಸಾಮರಸ್ಯ ಹಾಳಾಗಿತ್ತು. ಇದೀಗ ರ್ಸಾರ ಇದರ ಬಗ್ಗೆ ಕ್ರಮ ಕೈಗೊಳ್ಳಲಿ ಎಂದು ಸಲಹೆ ನೀಡಿದರು. ನಮ ಸರ್ಕಾರ ಎಲ್ಲ ಧರ್ಮಗಳ ನಡುವೆ ಒಗ್ಗಟ್ಟು, ಸಾಮರಸ್ಯ ಮೂಡಿಸಲು ಬದ್ದವಾಗಿದೆ.
ಸದಸ್ಯರ ಕಳಕಳಿಯಂತೆ ನವರಸ ನೃತ್ಯೋತ್ಸವ ಕಾರ್ಯಕ್ರಮವನ್ನು ಪ್ರಾರಂಭಿಸಲು ತೀರ್ಮಾನ ತೆಗೆದುಕೊಳ್ಳುತ್ತೇವೆ. ಇದಕ್ಕೆ ಬೇಕಾದ ಅನುದಾನವನ್ನು ಸಹ ನೀಡಲು ಸರ್ಕಾರ ಸಿದ್ದವಿದೆ ಎಂದು ಹೇಳಿದರು.