ಗರಿಯಾಬಂದ್, ಮೇ 3: ಛತ್ತೀಸ್ ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಓರ್ವ ನಕ್ಸ ಲೀಯನನ್ನು ಹತ್ಯೆ ಮಾಡಲಾಗಿದೆ. ಜುಗಾಡ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ತಡರಾತ್ರಿ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಸಿಬ್ಬಂದಿಯ ತಂಡವು ನಕ್ಸ ಲೀಯ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುಂಡಿನ ಚಕಮಕಿ ನಿಂತ ನಂತರ, ಸ್ಥಳದಿಂದ ನಕ್ಸ ಲೀಯನ ಶವ ಮತ್ತು ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
2026ರೊಳಗೆ ದೇಶವನ್ನು ನಕ್ಸಲ್ ಮುಕ್ತಗೊಳಿಸುವ ಕೇಂದ್ರ ಗೃಹಸಚಿವ ಅಮಿತ್ ಷಾ ಅವರ ಕರೆಯ ಮೇರೆಗೆ ದೇಶದಾದ್ಯಂತ ನಕ್ಸಲ್ ವಿರುದ್ಧದ ಕಾರ್ಯಚರಣೆಯನ್ನು ತೀವ್ರಗೊಳಿಸಲಾಗಿದೆ.