ನವದೆಹಲಿ.ಜು.26- ಬರ್ಮಿಂಗ್ಹ್ಯಾಮ್ ನಲ್ಲಿ ಶುರುವಾಗಲಿರುವ ಕಾಮನ್ವೆಲ್ತ್ ಗೇಮ್ಸ್ ನಿಂದ ಭಾರತದ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಗಾಯದ ಸಮಸ್ಯೆಯಿಂದ ಹೊರಬಿದ್ದಿದ್ದಾರೆ.
ಇದೇ ಜುಲೈ 28 ರಿಂದ ಕ್ರೀಡಾಕೂಟದ ಪ್ರಾರಂಭಕ್ಕೂ ಮುನ್ನ ಪ್ರಮುಖ ಜಾವೆಲಿನ್ ಸ್ರ್ಪಧಿ ಭಾಗವಹಿಸಲು ಸಾಧ್ಯವಾಗದಿರುವುದು ಭಾರತ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.
ಕೆಲ ದಿನಗಳ ಹಿಂದೆ ನಡೆದ ವಿಶ್ವ ಅಥ್ಲೆಟಿಕ್ಸ ಚಾಂಪಿಯನ್ಶಿಪ್ನಲ್ಲಿ ನೀರಜ್ ಚೋಪ್ರಾ ಗಾಯಗೊಂಡಿದ್ದು, ಹೀಗಾಗಿ ಕಾಮನïವೆಲ್ತï ಗೇಮ್ಸïನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ತಿಳಿಸಲಾಗಿದೆ.
ನೀರಜ್ ಚೋಪ್ರಾ ಕಾಲಿನ ಎಂಆರ್ಐ ಸ್ಕ್ಯಾನ್ ಮಾಡಲಾಗಿತ್ತು. ಅದರಲ್ಲಿ ಅವರ ತೊಡೆಸಂದು ಭಾಗಕ್ಕೆ ಗಂಭೀರ ಗಾಯವಾಗಿರುವುದು ಕಂಡು ಬಂದಿದೆ.