ನೀಟ್ ಪಿಜಿ ಪರೀಕ್ಷೆ ಮುಂದೂಡಿಕೆ

Social Share

ಬೆಂಗಳೂರು,ಫೆ.4- ಮಾರ್ಚ್ 12ಕ್ಕೆ ನಿಗದಿಯಾಗಿದ್ದ ನೀಟ್ ಪಿಜಿ ಪರೀಕ್ಷೆಯನ್ನು ಕೇಂದ್ರ ಆರೋಗ್ಯ ಸಚಿವಾಲಯ 8 ವಾರಗಳ ಕಾಲ ಮುಂದೂಡಿದೆ.
2022ರ ನೀಟ್ ಪರೀಕ್ಷೆ(ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ-ಸ್ನಾತಕೋತ್ತರ ಪದವಿ)ಯ ದಿನಾಂಕವನ್ನು ಮುಂದೂಡುವಂತೆ ಕೋರಿ ಎಂಬಿಬಿಎಸ್ ವಿದ್ಯಾರ್ಥಿಗಳು ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದು, ಇದರ ಬೆನ್ನಲ್ಲೇ ಸರ್ಕಾರ ಪರೀಕ್ಷೆಯನ್ನು ಮುಂದೂಡಿದೆ.
ಇಂದು ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆ ನಡೆಯಲಿದೆ. ಕಡ್ಡಾಯ ಇಂಟರ್ನ್‍ಶಿಪ್ ಪೂರೈಸದ ಕಾರಣ ಪರೀಕ್ಷೆ ಮುಂದೂಡುವಂತೆ 6 ಎಂಬಿಬಿಎಸ್ ವಿದ್ಯಾರ್ಥಿಗಳು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಕೋವಿಡ್ ಕರ್ತವ್ಯದಿಂದಾಗಿ ಇಂಟರ್ನ್‍ಶಿಪ್ ಪೂರೈಸಲು ಸಾಧ್ಯವಾಗಿಲ್ಲ ಎಂದು ಅವರು ಹೇಳಿದ್ದರು. ಈ ಸಂಬಂಧದ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್‍ನಲ್ಲಿ ನಡೆಯಲಿದೆ. ಈ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಚ್‍ನಲ್ಲಿ ನಿಗದಿಯಾಗಿದ್ದ ನೀಟ್ ಪಿಜಿ ಪರೀಕ್ಷೆಯನ್ನು 6ರಿಂದ 8 ವಾರಗಳ ಕಾಲ ಮುಂದೂಡಿದೆ.

Articles You Might Like

Share This Article