Friday, June 21, 2024
Homeರಾಜ್ಯನೇಹಾ ಹತ್ಯೆ ಪ್ರಕರಣ ಸಿಐಡಿ ತನಿಖೆ : ಸಿಎಂ ಸಿದ್ದರಾಮಯ್ಯ

ನೇಹಾ ಹತ್ಯೆ ಪ್ರಕರಣ ಸಿಐಡಿ ತನಿಖೆ : ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ, ಏ.22- ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಭೀಕರ ಹತ್ಯೆಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತ ವಿದ್ಯಾರ್ಥಿನಿ ನೇಹಾ ಕೊಲೆಗೆ ಸೂಕ್ತ ನ್ಯಾಯ ದೊರಕಿಸಬೇಕು. ತ್ವರಿತಗತಿಯಲ್ಲಿ ನ್ಯಾಯ ದೊರಕಿಸಿಕೊಡಲು ಸರ್ಕಾರ ತನಿಖೆಯನ್ನು ಸಿಐಡಿಗೆ ನೀಡಿದೆ. ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ವಹಿಸಿಕೊಡಲು ಕೂಡ ನಿರ್ಧರಿಸಲಾಗಿದೆ ಎಂದು ಹೇಳಿದರು.

ನಮ್ಮ ಆಡಳಿತ ಅಪರಾಧ ಪ್ರಕರಣಗಳು ಕಡಿಮೆಯಾಗಿದೆ ಕಾನೂನು ಸುವ್ಯವಸ್ತೆ ಕಾಪಾಡಲಾಗುತ್ತಿದೆ ಆದರೆ ಹಿಂದಿನ ಬಿಜೆಪಿ ಆಡಳಿತದಲ್ಲಿ ಹೆಚ್ಚು ಅಪರಾಧ ಘಟನೆ ನಡೆದಿವೆ ಎಂದು ಆರೋಪಿಸಿದರು .ನಮ್ಮ ಆಡಳಿತದಲ್ಲಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಹೇಳಿದರು.

RELATED ARTICLES

Latest News