ನೇಕಾರ ಸಮ್ಮಾನ್ ಯೋಜನೆ ಜಾರಿ: 5000ರೂ. ನೇರ ನಗದು ವರ್ಗಾವಣೆ..

Social Share

ಬೆಂಗಳೂರು, ಡಿ.16- ಕೈಮಗ್ಗ ನೇಕಾರರಿಗೆ ತಲಾ 5000 ರೂ. ನೀಡುವ ನೇಕಾರ ಸಮ್ಮಾನ್ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಯಿ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಸೇರಿದಂತೆ ಮತ್ತಿತರರ ಅಧಿಕಾರಿಗಳು ಯೋಜನೆಗೆ ಚಾಲನೆ ಕೊಟ್ಟರು.

ಇಂದಿನಿಂದಲೇ ಅನ್ವಯವಾಗುವಂತೆ ಕೈಮಗ್ಗ ನೇಕಾರರಿಗೆ ನೇರ ನಗದು ವರ್ಗಾವಣೆ ಮುಖಾಂತರ ಪ್ರತಿ ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು 5000ರೂ.ನಂತೆ ಒಟ್ಟು 2343.20 ಕೋಟಿ ರೂ.ಗಳನ್ನು ನೇಕಾರರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಗೆ ಮಾಡಲಾಗಿದೆ.

ಕಳ್ಳಭಟ್ಟಿ ದುರಂತ: ಸಾವಿನ ಸಂಖ್ಯೆ 28ಕ್ಕೆ ಏರಿಕೆ

ಕೈಮಗ್ಗ ನೇಕಾರರ ಚಟುವಟಿಕೆಗಳ ಪಾರಂಪರಿಕ ಕಲೆ ಮತ್ತು ಅವರ ಶ್ರಮವನ್ನು ಪರಿಗಣಿಸಿ ಹಾಗೂ ಕೋವಿಡ್-19 ಮಹಾಮಾರಿ ಮತ್ತು ಆರ್ಥಿಕ ಹಿನ್ನಡೆಯಿಂದ ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ 2020-21ನೆ ಸಾಲಿನಿಂದ ಅನ್ವಯವಾಗುವಂತೆ, ನೇಕಾರ ಸಮ್ಮಾನ್ ಎಂಬ ಹೊಸ ಯೋಜನೆಯನ್ನು ಮುಖ್ಯಮಂತ್ರಿಯವರು ಘೋಷಣೆ ಮಾಡಿದ್ದು, ಇದು ಕೈಮಗ್ಗ ನೇಕಾರರಿಗೆ ಸಹಾಯಕವಾಗಲಿದೆ.

2021-22ನೆ ಸಾಲಿನಲ್ಲಿ ನೇಕಾರ ಸಮ್ಮಾನ್ ಯೋಜನೆಯಡಿ 49,544 ನೇಕಾರರಿಗೆ 990.88 ಲಕ್ಷ ರೂ.ಗಳನ್ನು ಡಿಬಿಟಿ ಮೂಲಕ ಬಿಡುಗಡೆ ಮಾಡಲಾಗಿದೆ.

ಕುಕ್ಕರ್ ಬಾಂಬ್ ಪ್ರಕರಣ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆ ಶಿವಕುಮಾರ್

2022-23ನೆ ಸಾಲಿನ ಆಯವ್ಯಯದನ್ವಯ ನೋಂದಾಯಿತ ಕೈಮಗ್ಗ ನೇಕಾರರಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವನ್ನು 2000ರೂ.ಗಳಿಂದ 5000 ರೂ.ಗಳಿಗೆ ಹೆಚ್ಚಿಸಿದೆ. ಇಲ್ಲಿಯವರೆಗೆ 46,864 ಅರ್ಜಿಗಳನ್ನು ಪರಿಶೀಲಿಸಿ ಅನುಮೋದನೆ ನೀಡಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Nekara Samman Yojana, CM Bommai, Implementation,

Articles You Might Like

Share This Article