NEP ಪಠ್ಯಕ್ರಮ ಜಾರಿಗೆ ತಜ್ಞರ ಸಮಿತಿ ರಚನೆ

Social Share

ಬೆಂಗಳೂರು,ನ.15- ಮುಂಬರುವ ಶೈಕ್ಷಣಿಕ ವರ್ಷದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ)
ಜಾರಿ ಮಾಡುವ ಸಂಬಂಧ ರಾಜ್ಯ ಪಠ್ಯ ಕ್ರಮ ಚೌಕಟ್ಟು ರಚನೆಗಾಗಿ ಶೀಘ್ರದಲ್ಲೇ ತಜ್ಞರ ಸಮಿತಿಯನ್ನು ರಚನೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿರ್ದೇಶನದಂತೆ ಬರುವ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಬೇಕು.

ರಾಜ್ಯ ಪಠ್ಯಕ್ರಮ ಚೌಕಟ್ಟು ಕುರಿತಾಗಿ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 7-8 ಮಂದಿಯ ತಜ್ಞರ ಸಮಿತಿಯನ್ನು ರಚನೆ ಮಾಡುತ್ತೇವೆ ಎಂದು ತಿಳಿಸಿದರು.

ಶ್ರದ್ದಾ ವಿಕೃತ ಹತ್ಯೆ ಹಿಂದೆ ಲವ್ ಜಿಹಾದ್ ಶಂಕೆ, ಗಲ್ಲು ಶಿಕ್ಷೆಗೆ ಒತ್ತಾಯ

ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಒಳಗೊಂಡ ಸಮನ್ವಯ ಸಮಿತಿಯನ್ನು ರಚಿಸಲಾಗುವುದು. 3ರಿಂದ 6 ವರ್ಷದೊಳಗಿನ ಮಕ್ಕಳಿಗೆ ಯಾವ ರೀತಿ ಪಠ್ಯಕ್ರಮ ಇರಬೇಕು ಎಂಬುದನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ 7ರಿಂದ 8ವರ್ಷದ ಮಕ್ಕಳಿಗೆ ಪಠ್ಯ ಕ್ರಮವನ್ನು ಶಿಕ್ಷಣ ಇಲಾಖೆ ತೀರ್ಮಾನಿಸಲಿದೆ ಎಂದರು.

ಡಿ.25ರೊಳಗೆ ಈ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಲು ನಿರ್ದೇಶನ ನೀಡಲಾಗುವುದು ಎಂದು ತಿಳಿಸಿದರು.
ಈಗಿನ ಶಿಕ್ಷಣ ನೀತಿ ಪ್ರಕಾರ ಮೊದಲ ಮೂರು ವರ್ಷದೊಳಗೆ ಮಕ್ಕಳಿಗೆ ಯಾವುದೇ ಪಠ್ಯ ಪುಸ್ತಕಗಳನ್ನು ನೀಡದೆ ಕೇವಲ ಚಟುವಟಿಕೆಗಳ ಮೂಲಕ ಶಿಕ್ಷಣ ನೀಡಬೇಕೆಂಬ ನಿರ್ದೇಶನವಿದೆ.

ರಿಷಿ ಸುನಕ್‍ ಮತ್ತು ಮೋದಿ ಮೊದಲ ಭೇಟಿ

ಮಕ್ಕಳಿಗೆ ಬಲವಂತಾಗಿ ಇಲ್ಲವೇ ಒತ್ತಾಯ ಪೂರ್ವಕವಾಗಿ ಪಠ್ಯ ಪುಸ್ತಕದಿಂದಲೇ ಬೋಧನೆ ಮಾಡಿದರೆ ಪರಿಣಾಮಕಾರಿಯಾಗಿ ಕಲಿಕೆ ಸಾಧ್ಯವಿಲ್ಲ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪ್ರಾಥಾಮಿಕ ಶಿಕ್ಷಣವನ್ನು ಕಡ್ಡಾಯವಾಗಿ ಮಾತೃಭಾಷೆ ಮೂಲಕವೇ ನೀಡಲಾಗುವುದು ಎಂದು ಸಚಿವರು ಸ್ಪಷಟಪಡಿಸಿದರು.

ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನಂತೆ ನಮಗೆ ಯಾವ ರೀತಿ ಪಠ್ಯಪುಸ್ತಕಗಳು ಇರಬೇಕು ಎಂಬುದರ ಕುರಿತು ಕೇಂದ್ರ ಶಿಕ್ಷಣ ಇಲಾಖೆ ಅಭಿಪ್ರಾಯ ಕೇಳಿತ್ತು. ಈಗಾಗಲೇ ನಾವು ಇಲಾಖೆ ವೆಬ್‍ಸೈಟ್ ಮೂಲಕ ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ ಎಂದರು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2030ರೊಳಗೆ ಕಡ್ಡಾಯವಾಗಿ ಅನುಷ್ಠಾನವಾಗಬೇಕೆಂಬ ನಿಯಮವಿದ್ದು, ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು ಹಾಗೂ ಅಧಿಕಾರಿ ವರ್ಗಕ್ಕೂ ನಾವು ತರಬೇತಿ ನೀಡುತ್ತಿದ್ದೇವೆ. ಈಗಾಗಲೇ ಕಲ್ಯಾಣ ಕರ್ನಾಟಕ ಸೇರಿದಂತೆ ವಿವಿಧ ಕಡೆ ಬೋಧನಾ ತರಬೇತಿಗಳು ಆರಂಭವಾಗಿವೆ. ಯಾವುದೇ ರೀತಿಯ ಸಮಸ್ಯೆಗಳ ಉದ್ಭವವಾಗದಂತೆ ಇಲಾಖೆ ಕೆಲ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ ಎಂದು ನಾಗೇಶ್ ತಿಳಿಸಿದರು.

ವಾಹನಗಳಿಗೆ ಪ್ಯಾನಿಕ್ ಬಟನ್ ಅಳವಡಿಕೆ ಯೋಜನೆಗೆ 21 ಕೋಟಿ ರೂ. ಮಂಜೂರು

ಈ ಬಾರಿ ನಾವು ಉತ್ತಮ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕು ಎಂಬ ಕಾರಣಕ್ಕಾಗಿ ಹಲವಾರು ಸಧಾರಣಾ ಕ್ರಮಗಳನ್ನು ಕೈಗೊಂಡಿದ್ದೇವೆ. ಹಿಂದಿನ ಸರ್ಕಾರಗಳು 5 ವರ್ಷಗಳಲ್ಲಿ ಕೇವಲ 3 ಸಾವಿರ ಶಿಕ್ಷಕರ ನೇಮಕಾತಿ ಹಾಗೂ 4,510 ಶಾಲಾ ಕೊಠಡಿಗಳನ್ನು ನಿರ್ಮಿಸಿದ್ದವು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 15 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೇವೆ. ಅವರಿಗೆ ತಿಂಗಳಿಗೆ ನೀಡಲಾಗುತ್ತಿದ್ದ 7500ಸಾವಿರ ಸಂಬಳವನ್ನು 10ಸಾವಿರಕ್ಕೆ ಏರಿಕೆ ಮಾಡಲಾಗಿದೆ.

Articles You Might Like

Share This Article