ಕಠ್ಮಂಡು, ಅ. 6- ಆಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಮಿಚಾನೆ ಅವರನ್ನು ಇಲ್ಲಿನ ತ್ರಿಭುವನ್ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಳೆದ ತಿಂಗಳು ಕಠ್ಮಂಡುವಿನಲ್ಲಿ ಅಪ್ರಾಪ್ತ ಮೇಲೆ ಸಂದೀಪ್ ಲಮಿಚಾನೆ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.ಲಮಿಚಾನೆ ಅವರು ಪ್ರೀಮಿಯರ್ ಕ್ರಿಕೆಟ್ ಲೀಗ್ನಲ್ಲಿ ಪಾಲ್ಗೊಂಡಿದ್ದರಿಂದ ನಾನು ಸ್ವದೇಶಕ್ಕೆ ಮರಳಿದ ನಂತರ ಪೊಲೀಸರ ಮುಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದರು .
ಫೇಸ್ಬುಕ್ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ಕ್ರಿಕೆಟಿಗ ಸಂದೀಪ್ ಲಮಿಚಾನೆ ಅವರು ನನ್ನ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರ ಪ್ರಕರಣದಲ್ಲಿ ನಾನು ಪೊಲೀಸರ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಹೇಳಿದ್ದೆ, ಅದರಂತೆ ನಾನು ತ್ರಿಭುವನ್ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದೇನೆ ಎಂದು ಕೂಡ ತಿಳಿಸಿದ್ದೇನೆ ಎಂದು ಹೇಳಿದ್ದರು.
ಅದರಂತೆ ತ್ರಿಭುವನ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಮಿಚಾನೆ ಅವರನ್ನು ಪೊಲೀಸರು ಬಂಧಿಸಿದ್ದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ಸಂದೀಪ್ ಲಮಿಚಾನೆ ಅವರನ್ನು ಬಂಧಿಸಿದ ವೇಳೆ ಅವರ ವಕೀಲರಾದ ಸರೋಜ್ ಕೃಷ್ಣ ಗಿರ್ಮಿರೆ ಅವರು ಹಾಜರಿದ್ದರು.
ನನ್ನ ಮೇಲೆ ಹೊರಿಸಲಾಗಿರುವ ಅತ್ಯಾಚಾರ ಪ್ರಕರಣವನ್ನು ಕಾನೂನು ಹೋರಾಟ ಮೂಲಕವೇ ಎದುರಿಸಿ ನಿರಪರಾಯಾಗಿ ಹೊರಬರುತ್ತೇನೆ ಎಂಬ ವಿಶ್ವಾಸವನ್ನು ಲಮಿಚಾನೆ ವ್ಯಕ್ತಪಡಿಸಿದರು.