ನವದೆಹಲಿ,ಮೇ 31-ನೆರೆಯ ನೇಪಾಳ ದೇಶದ ಪ್ರಧಾನ ಮಂತ್ರಿ ಪುಷ್ಪ ಕಮಲ್ ದಹಲ್ ಪ್ರಚಂಡ ಅವರು ಇಂದು ಭಾರತಕ್ಕೆ ಭೇಟಿ ನೀಡಿದ್ದಾರೆ. ನಾಲ್ಕು ದಿನಗಳ ಕಾಲ ಭಾರತ ಪ್ರವಾಸದಲ್ಲಿರುವ ಪ್ರಚಂಡ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಪ್ರಮುಖರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.
ಕಳೆದ ವರ್ಷ ಡಿಸೆಂಬರ್‍ನಲ್ಲಿ ಅಧಿಕಾರ ವಹಿಸಿಕೊಂಡ ಪ್ರಚಂಡ ಅವರು, ತಮ್ಮ ಭಾರತೀಯ ಸಹವರ್ತಿ ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಮೇ 31-ಜೂನ್ 3ರವರೆಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ಭೇಟಿಯ ಸಮಯದಲ್ಲಿ, ನೇಪಾಳದ ಪ್ರಧಾನಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರನ್ನು ಭೇಟಿ ಮಾಡಲಿದ್ದಾರೆ.
ತಾಕತ್ತಿದ್ದರೆ ಚೀನಾ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿ: ಓವೈಸಿ
ಪ್ರಚಂಡ ಅವರು ನಾಳೆ ಬೆಳಿಗ್ಗೆ 10.30 ಕ್ಕೆ ಮಹಾತ್ಮ ಗಾಂಧಿಯವರ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ತಮ್ಮ ವೇಳಾಪಟ್ಟಿಯನ್ನು ಪ್ರಾರಂಭಿಸಲಿದ್ದಾರೆ. ಸಂಜೆ 4 ಗಂಟೆಗೆ, ನೇಪಾಳದ ಪ್ರಧಾನಿ ಅವರು ಉಪಾಧ್ಯಕ್ಷ ಜಗದೀಪ್ ಧನ್‍ಖರ್ ಅವರನ್ನು ಮೌಲಾನಾ ಆಜಾದ್ ರಸ್ತೆಯಲ್ಲಿರುವ ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಲಿದ್ದಾರೆ. ಅದರ ನಂತರ, ದಹಲ್ ಅವರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ.
ಭಾರತ ಮತ್ತು ನೇಪಾಳ ನಡುವಿನ ದ್ವಿಪಕ್ಷೀಯ ಸಹಭಾಗಿತ್ವದ ವಿವಿಧ ಕ್ಷೇತ್ರಗಳ ಕುರಿತು ಪ್ರಧಾನಿ ದಹಲ್ ಅವರು ಪ್ರಧಾನಿ ಮೋದಿಯವರೊಂದಿಗೆ ವ್ಯಾಪಕ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಕೃತ ಹೇಳಿಕೆಯಲ್ಲಿ ತಿಳಿಸಿದೆ.ಹಲವಾರು ಇತರ ಭಾರತೀಯ ಗಣ್ಯರು ನೇಪಾಳದ ಪ್ರಧಾನ ಮಂತ್ರಿಯವರನ್ನು ಭೇಟಿ ಮಾಡಲಿದ್ದಾರೆ.
ಧ್ರುವ ಹಾರಾಟಕ್ಕೆ ಷರತ್ತುಬದ್ಧ ಅನುಮತಿ
ಈ ಭೇಟಿಯು ಭಾರತ ಮತ್ತು ನೇಪಾಳದ ನಡುವಿನ ನಿಯಮಿತ ಉನ್ನತ ಮಟ್ಟದ ವಿನಿಮಯದ ಸಂಪ್ರದಾಯವನ್ನು ‘ನೆರೆಹೊರೆಗೆ ಮೊದಲು’ ನೀತಿಯನ್ನು ಮುಂದುವರೆಸುತ್ತದೆ.
ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳು ಕಳೆದ ಕೆಲವು ವರ್ಷಗಳಲ್ಲಿ ಸಹಕಾರದ ಎಲ್ಲಾ ಕ್ಷೇತ್ರಗಳಲ್ಲಿ ಗಮನಾರ್ಹವಾಗಿ ಬಲಗೊಂಡಿವೆ.
Nepal, #PMPrachanda, #4Day, #Visit, #India,