Monday, March 10, 2025
Homeರಾಜ್ಯ3 ಕೋಟಿ ರೂ. ವೆಚ್ಚದಲ್ಲಿ ಮೈಸೂರಿನಲ್ಲಿ ಹೊಸ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣ

3 ಕೋಟಿ ರೂ. ವೆಚ್ಚದಲ್ಲಿ ಮೈಸೂರಿನಲ್ಲಿ ಹೊಸ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣ

New fire station building to be constructed in Mysore at a cost of Rs 3 crore

ಬೆಂಗಳೂರು,ಮಾ.7- ಮೈಸೂರು ನಗರ ವ್ಯಾಪ್ತಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಹೊಸ ಅಗ್ನಿಶಾಮಕ ಠಾಣಾ ಕಟ್ಟಡವನ್ನು ನಿರ್ಮಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆಯಲ್ಲಿ 2025 -26ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯ ವಿಸ್ತರಣೆ ಮತ್ತು ಆಧುನಿಕರಣ ಕಾರ್ಯವನ್ನು 15 ನೇ ಹಣಕಾಸು ಆಯೋಗದ ಅನುದಾನದಡಿ 330 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು ಎಂದರು.

ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯಿಂದ 2024-25ನೇ ಸಾಲಿನಲ್ಲಿ 4300 ಜನರನ್ನು ಅಗ್ನಿ ಅನಾಹುತದಿಂದ ರಕ್ಷಿಸಿ ಸುಮಾರು 1,501 ಕೋಟಿ ರೂ. ಮೊತ್ತದ ಖಾಸಗಿ ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿಗಳನ್ನು ರಕ್ಷಿಸಲಾಗಿದೆ ಎಂದರು.

ಕೆ-ಸಿಫ್-2 ಯೋಜನೆಯಡಿ ಉಪಕರಣಗಳ ಖರೀದಿ ಮತ್ತು ಕಟ್ಟಡ ನಿರ್ಮಾಣಕ್ಕಾಗಿ 50ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು. ಬಹು ಮಹಡಿ ಕಟ್ಟಡಗಳಲ್ಲಿ ಸಂಭವಿಸಬಹುದಾದ ಅಗ್ನಿ ಅನಾಹುತ ತಡೆಗಟ್ಟುವ ಸಲುವಾಗಿ 52-54 ಮೀ. ಎತ್ತರಕ್ಕೆ ತಲುಪುವ ಏರಿಯಲ್ ಲ್ಯಾಡರ್ ಪ್ಲಾಟ್‌ಫಾರಂ ವಾಹನ ಒದಗಿಸಲಾಗುವುದು ಎಂದು ಅವರು ಹೇಳಿದರು.

RELATED ARTICLES

Latest News