ಇಂದಿನಿಂದ ರಾಜ್ಯಾದ್ಯಂತ ಹೊಸ ಮಾರ್ಗಸೂಚಿ ಜಾರಿ, ಇಲ್ಲಿದೆ ಕಂಪ್ಲೀಟ್ ಮಾಹಿತಿ

Social Share

ಬೆಂಗಳೂರು,ಜ.6- ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲು ಸರ್ಕಾರ ಜಾರಿ ಮಾಡಿರುವ ಹೊಸ ಮಾರ್ಗಸೂಚಿ ಇಂದಿನಿಂದ ರಾಜ್ಯಾದ್ಯಂತ ಜಾರಿಯಾಗಲಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯಂತೆ ನಾಳೆ ರಾತ್ರಿ 10 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೂ ನೈಟ್ ಕಫ್ರ್ಯೂ ಜಾರಿಯಾಗಲಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇತರೆ ಚಟುವಟಿಕೆಗಳಿಗೆ ಕಡಿವಾಣ ಬೀಳಲಿದೆ.
ಹಾಲು, ಹಣ್ಣು, ತರಕಾರಿ, ದಿನಸಿ ಅಂಗಡಿಗಳು, ಔಷಧಿ ಅಂಗಡಿಗಳು, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಲಿದ್ದು, ಉಳಿದಂತೆ ಬಹುತೇಕ ಚಟುವಟಿಕೆಗಳು ಸ್ತಬ್ಧಗೊಳ್ಳಲಿವೆ. ಖಾಸಗಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ಗುರುತಿನ ಚೀಟಿ ತೋರಿಸಿ ಕಚೇರಿಗೆ ತೆರಳಬಹುದು.
ಹೋಟೆಲ್‍ಗಳಲ್ಲಿ ಪಾರ್ಸಲ್‍ಗೆ ಅವಕಾಶ ನೀಡಿದ್ದು, ಮಾರುಕಟ್ಟೆ, ಮಾಲ್‍ಗಳು, ಸಂತೆ ಮೈದಾನ ಸೇರಿದಂತೆ ಮತ್ತಿತರ ಕಡೆ ಜನ ಜಂಗುಳಿ ಸೇರುವುದಕ್ಕೆ ನಿರ್ಬಂಧ ಹಾಕಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ ಮಾಡಲಾಗುತ್ತಿದ್ದು, 5ಕ್ಕಿಂತ ಹೆಚ್ಚು ಜನ ಗುಂಪು ಗೂಡುವಂತಿಲ್ಲ. ಈ ಸಂದರ್ಭದಲ್ಲಿ ಪ್ರತಿಭಟನೆ, ಮೆರವಣಿಗೆ, ಪಾದಯಾತ್ರೆ, ಧಾರ್ಮಿಕ ಸಭೆ-ಸಮಾರಂಭಗಳನ್ನು ಸಹ ನಿಷೇಧಿಸಲಾಗಿದೆ.
ಬಸ್‍ನಲ್ಲಿ ಪ್ರಯಾಣಿಸುವವರು ಮುಂಗಡ ಖರೀದಿಸಿದ್ದ ಟಿಕೆಟ್ ತೋರಿಸಿ ಪ್ರಯಾಣಿಸಬಹುದು. ಕೆಎಸ್‍ಆರ್‍ಟಿಸಿ ಬಸ್‍ಗಳು ಅಗತ್ಯಕ್ಕೆ ಅನುಗುಣವಾಗಿ ಮಾತ್ರ ಸಂಚರಿಸಲಿವೆ. ಬಿಎಂಟಿಸಿ ಕೂಡ ಇದೇ ನಿಯಮವನ್ನು ಪಾಲನೆ ಮಾಡಲಿದೆ. ಬೆಂಗಳೂರಿನಲ್ಲಿ ಶಾಲೆಗಳನ್ನು ಇಂದಿನಿಂದ ಎರಡು ವಾರಗಳ ಕಾಲ ಅನ್ವಯವಾಗುವಂತೆ ಬಂದ್ ಮಾಡಲಾಗಿದೆ.
ಆದರೆ, 10, 11 ಹಾಗೂ 12ನೇ ತರಗತಿಗಳು ಮಾತ್ರ ನಡೆಯಲಿವೆ. 1ರಿಂದ 9ನೇ ತರಗತಿವರೆಗೆ ಆನ್‍ಲೈನ್ ಕ್ಲಾಸ್ ನಡೆಯಲಿದ್ದು, ವೈದ್ಯಕೀಯ, ಅರೆವೈದ್ಯಕೀಯ, ನರ್ಸಿಂಗ್ ಕಾಲೇಜುಗಳು ಮಾತ್ರ ತರಗತಿಗಳು ನಡೆದರೆ , ಪದವಿ, ಇಂಜನಿಯರಿಂಗ್ ಕಾಲೇಜುಗಳಲ್ಲಿ ಭೌತಿಕ ತರಗತಿಗಳು ನಡೆಯುವುದಿಲ್ಲ.
ಉಳಿದಂತೆ ರಾಜ್ಯದ ಇತರ ಕಡೆ ಈಗಿರುವ ಯಥಾಸ್ಥಿತಿ ಮುಂದುವರೆಯಲಿದ್ದು, ಶಾಲಾ-ಕಾಲೇಜುಗಳು ಎಂದಿನಂತೆ ನಡೆಯಲಿವೆ.
ನಾಳೆ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವಾರಾಂತ್ಯ ಕಫ್ರ್ಯೂ ಜಾರಿ ಮಾಡಲಾಗುತ್ತದೆ. ಈ ವೇಳೆ, ಹೊರಜಿಲ್ಲಾ, ರಾಜ್ಯಗಳಿಂದ ಬರುವವರಿಗೆ ವಾಹನಗಳ ಟಿಕೆಟ್ ಇದ್ದರೆ ಅಡ್ಡಿ ಇರುವುದಿಲ್ಲ. ಅನಗತ್ಯ ಓಡಾಟಗಳಿಗೆ ನಿರ್ಬಂಧ ವಿಧಿಸಲಾಗುತ್ತದೆ.
ಆದರೆ, ದಿನಸಿ ಅಂಗಡಿ, ಹಾಲು, ತರಕಾರಿ, ಔಷಧ, ಪೆಟ್ರೋಲ್ ಮತ್ತಿತರ ಅಗತ್ಯ ವಸ್ತುಗಳ ಖರೀದಿಗೆ ನಿರ್ಬಂಧ ಇರುವುದಿಲ್ಲ. ಬಸ್, ರೈಲು, ಮೆಟ್ರೊ, ಆಟೋ ಸೇವೆಗಳಿಗೆ ವಾರದ ದಿನಗಳಲ್ಲಿ ನಿರ್ಬಂಧ ಇರುವುದಿಲ್ಲ. ರಜಾದಿನ ಬಿಟ್ಟು ವಾರದ ಎಲ್ಲ ದಿನಗಳಲ್ಲಿ ಕೇಂದ್ರ ಸರ್ಕಾರ ಜಾರಿ ಮಾಡಿರುವಂತೆ ಸರ್ಕಾರಿ ಕಚೇರಿಗಳಲ್ಲಿ ಶೇ 50ರಷ್ಟು ಸಿಬ್ಬಂದಿ 50:50 ಅನುಪಾತದಲ್ಲಿ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಚಿತ್ರ ಮಂದಿರ, ಬಾರ್, ಪಬï, ರೆಸ್ಟೋರೆಂಟ್‍ಗಳಲ್ಲಿ ಕೂಡ ಒಟ್ಟು ಆಸನ ಸಾಮಥ್ರ್ಯದ ಶೇ.50ರಷ್ಟು ಆಸನಗಳನ್ನು ಭರ್ತಿ ಮಾಡಲು ಅವಕಾಶ ನೀಡಲಾಗಿದೆ. ಕಫ್ರ್ಯೂ ದಿನಗಳಲ್ಲಿ ಪಾರ್ಸೆಲ್ ಮಾತ್ರ ಅವಕಾಶ ನೀಡಲಾಗಿದೆ.

Articles You Might Like

Share This Article