ನವದೆಹಲಿ,ಫೆ.1- ಕೆವೈಸಿ ನಿಯಮಗಳನ್ನು ಇನ್ನಷ್ಟು ಸರಳೀಕರಣಗೊಳಿಸುವ ಸದುದ್ದೇಶದಿಂದ ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಪ್ರಕಟಿಸಿದ್ದಾರೆ.
ಲೋಕಸಭೆಯಲ್ಲಿ ಮಂಡಿಸಿದ ಪ್ರಸಕ್ತ 2025-26ನೇ ಸಾಲಿನ ಆಯವ್ಯಯದಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಮುಂದಿನ ವಾರ ಮಂಡನೆ ಮಾಡಲಾಗುತ್ತದೆ. ಈ ಮಸೂದೆಯು ಕೆವೈಸಿ ನಿಯಮಗಳನ್ನು ಸರಳೀಕರಣ ಮಾಡಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ವಿಮಾ ಕ್ಷೇತ್ರಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆ ಶೇ.100ಕ್ಕೆ ಏರಿಕೆ, ಇಂಡಿಯಾ ಪೋಸ್ಟ್ ಸೇವೆ ಗ್ರಾಮೀಣ ಭಾಗಗಳಿಗೆ ವಿಸ್ತರಣೆ, ಭೂಮಿ ದಾಖಲೆ ಆಧುನಿಕರಣ, ನಗರ ಯೋಜನೆ, ಮೂಲಸೌಕರ್ಯಗಳ ಪ್ಲಾನಿಂಗ್ ಡಿಜಿಟಲೀಕರ, ಆಟಿಕೆಗಳಿಗಾಗಿ ರಾಷ್ಟ್ರೀಯ ಕ್ರಿಯಾ ಯೋಜನೆಯನ್ನು ನಿರ್ಮಿಸುವ ಯೋಜನೆಯನ್ನು ಜಾರಿಗೆ ತರುತ್ತೇವೆ ಎಂದು ಹೇಳಿದರು.
ಕ್ಲಸ್ಟರ್‌ಗಳು, ಕೌಶಲ್ಯಗಳು ಮತ್ತು ಉತ್ಪಾದನಾ ಪರಿಸರ ವ್ಯವಸ್ಥೆಯ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುತ್ತಿದ್ದು ಇದು ಮೇಡ್ ಇನ್ ಇಂಡಿಯಾ ಬ್ರ್ಯಾಂಡ್‌ನ್ನು ಪ್ರತಿನಿಧಿಸುವ ಉತ್ತಮ ಗುಣಮಟ್ಟದ, ವಿಶಿಷ್ಟ, ನವೀನ ಮತ್ತು ಸುಸ್ಥಿರ ಆಟಿಕೆಗಳನ್ನು ರಚಿಸಲು ಸಹಾಯ ಮಾಡುತ್ತದೆ ಎಂದು ಅವರು ತಿಳಿಸಿದರು.