ಧರ್(ಮಧ್ಯಪ್ರದೇಶ),ಸೆ.17- ಜಮು ಮತ್ತು ಕಾಶೀರದ ಪಹಲ್ಗಾಮ್ನಲ್ಲಿ ನಡೆದ ನರಮೇಧಕ್ಕೆ ಪ್ರತಿಕಾರವಾಗಿ ಭಾರತೀಯ ಸೇನಾಪಡೆ ನಡೆಸಿದ ಆಪರೇಷನ್ ಸಿಂಧೂರ್ ಯಶಸ್ಸನ್ನು ಶ್ಲಾಘಿಸಿರುವ ಪ್ರಧಾನಿ ನರೇಂದ್ರಮೋದಿ, ಭಾರತ ಪರಮಾಣು ಬೆದರಿಕೆಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ಮತ್ತೆ ಪಾಕಿಸ್ತಾನಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಮಧ್ಯಪ್ರದೇಶದ ಧರ್ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಮೋದಿಯವರು , ಕೆಲವರು ಪರಮಾಣು ಬಾಂಬ್ಗಳನ್ನು ಇಟ್ಟುಕೊಂಡು ನಮನ್ನು ಬ್ಲಾಕ್ಮೇಲ್ ಮಾಡಲು ಬರುತ್ತಿದ್ದಾರೆ. ಅವರಿಗೆ ಇಲ್ಲಿಂದಲೇ ನಾನು ಎಚ್ಚರಿಕೆ ಕೊಡುತ್ತೇನೆ. ಭಾರತವು ಕೂಡ ಪರಮಾಣು ರಾಷ್ಟ್ರ ಎಂಬುದನ್ನು ಮರೆಯಬೇಡಿ ಎಂದು ಗುಡುಗಿದರು.ಇದು ಹೊಸ ಭಾರತ. ಇದು ಯಾರಿಗೂ ಹೆದರುವುದಿಲ್ಲ. ಭಾರತೀಯ ಪಡೆಗಳು ಮನೆಗಳಿಗೆ ನುಗ್ಗಿ ಶತ್ರುಗಳನ್ನು
ಹೊಡೆಯುವ ಶಕ್ತೀಯನ್ನು ಹೊಂದಿವೆ. ಹೊಸ ಭಾರತ ಪರಮಾಣು ಬೆದರಿಕೆಗಳಿಗೆ ಹೆದರುವುದಿಲ್ಲ. ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರು ಭಾರತದೊಂದಿಗೆ ಭವಿಷ್ಯದ ಯುದ್ಧದಲ್ಲಿ ಇಸ್ಲಾಮಾಬಾದ್ ಅಸ್ತಿತ್ವದ ಬೆದರಿಕೆಯನ್ನು ಎದುರಿಸಿದರೆ ಪರಮಾಣು ಯುದ್ಧ ಮತ್ತು ಅರ್ಧ ಪ್ರಪಂಚವನ್ನು ನಾಶಮಾಡುವ ಬೆದರಿಕೆಯ ಬಗ್ಗೆ ನೀಡಿದ್ದ ಎಚ್ಚರಿಕೆಯನ್ನು ಅವರು ಸ್ಪಷ್ಟವಾಗಿ ಉಲ್ಲೇಖಿಸಿದರು.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶೀರದಲ್ಲಿನ ತನ್ನ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ ಸಮಯದಲ್ಲಿ ನಷ್ಟವನ್ನು ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮದ್ (ಜೆಇಎಂ) ಒಪ್ಪಿಕೊಂಡಿರುವುದು ನವದೆಹಲಿಯ ವಿರುದ್ಧ ಭಯೋತ್ಪಾದನೆಯನ್ನು ಪ್ರಾಯೋಜಿಸುವಲ್ಲಿ ಇಸ್ಲಾಮಾಬಾದ್ ಪಾತ್ರವನ್ನು ಬಹಿರಂಗಪಡಿಸಿದೆ ಎಂದು ಅವರು ಹೇಳಿದರು.
ಆಪರೇಷನ್ ಸಿಂಧೂರ್ ಸಮಯದಲ್ಲಿ ಬಹಾವಲ್ಪುರದಲ್ಲಿ ಭಾರತೀಯ ಪಡೆಗಳು ಜೈಶ್- ಎ- ಮೊಹಮದ್ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಅವರ ಕುಟುಂಬವನ್ನು ಛಿದ್ರ ಛಿದ್ರ ಮಾಡಿವೆ ಎಂದು ಜೆಇಎಂನ ಉನ್ನತ ಸದಸ್ಯ ಮಸೂದ್ ಇಲ್ಯಾಸ್ ಕಾಶೀರಿ ಹೇಳಿದ ಮರುದಿನವೇ ಮೋದಿ ಇದನ್ನು ಉಲ್ಲೇಖಿಸಿದ್ದಾರೆ.
ಇದೇ ವೇಳೆ ಮೋದಿ ಅವರು, ಜಿಲ್ಲೆಯಲ್ಲಿ ದೇಶದ ಮೊದಲ ಪ್ರಧಾನ ಮಂತ್ರಿ ಮೆಗಾ ಇಂಟಿಗ್ರೇಟೆಡ್ ಜವಳಿ ಪ್ರದೇಶ ಮತ್ತು ಉಡುಪು (ಪಿಎಂ ಮಿತ್ರ) ಉದ್ಯಾನವನಕ್ಕೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು. ೞಸ್ವಸ್ಥ ನಾರಿ ಸಶಕ್ತ ಪರಿವಾರ್ೞ ಮತ್ತು ೞರಾಷ್ಟ್ರೀಯ ಪೋಷಣಾ ಮಾಹ್ೞ ಅಭಿಯಾನಗಳಿಗೂ ಚಾಲನೆ ನೀಡಿದರು.
ಮಧ್ಯಪ್ರದೇಶ, ತೆಲಂಗಾಣ, ಗುಜರಾತ್, ಕರ್ನಾಟಕ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಏಳು ಸ್ಥಳಗಳಲ್ಲಿ ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಸೌಲಭ್ಯಗಳೊಂದಿಗೆ ದೊಡ್ಡ ಪ್ರಮಾಣದ ಜವಳಿ ಉತ್ಪಾದನಾ ಕೇಂದ್ರಗಳನ್ನು ಸ್ಥಾಪಿಸುವುದು ಪಿಎಂ ಮಿತ್ರ ಯೋಜನೆಯ ಉದ್ದೇಶವಾಗಿದೆ. ಧಾರ್ ಜಿಲ್ಲೆಯ ಭೈನ್ಸೋಲಾ ಗ್ರಾಮದಲ್ಲಿ ಸುಮಾರು 2,158 ಎಕರೆ ಪ್ರದೇಶದಲ್ಲಿ ಪಿಎಂ ಮಿತ್ರ ಪಾರ್ಕ್ ತಲೆ ಎತ್ತಲಿದೆ. ಇದು ವಿಶ್ವ ದರ್ಜೆಯ ಸೌಲಭ್ಯಗಳನ್ನು ಹೊಂದಿದ್ದು, ಹತ್ತಿ ಉತ್ಪಾದಕರಿಗೆ ಹೇರಳವಾಗಿ ಪ್ರಯೋಜನವನ್ನು ನೀಡುತ್ತದೆ ಎಂದು ಅದು ಹೇಳಿದೆ.
ಮಾನಸಿಕ ಆರೋಗ್ಯ, ಲಿಂಗ ಸಮಾನತೆ, ಹದಿಹರೆಯದವರ ರಕ್ತಹೀನತೆ ನಿರ್ವಹಣೆ ಮತ್ತು ಸಕ್ರಿಯ ಜೀವನಶೈಲಿಯ ಮೇಲೆ ಕೇಂದ್ರೀಕರಿಸುವ ಮೂಲಕ ಮಹಿಳೆಯರ ಆರೋಗ್ಯಕ್ಕೆ ಆದ್ಯತೆ ನೀಡುವ ಸ್ವಸ್ಥ್ ನಾರಿ ಸಶಕ್ತ ಪರಿವಾರ್ ಅಭಿಯಾನವು ಆಯುಷಾನ್ ಆರೋಗ್ಯ ಮಂದಿರಗಳಲ್ಲಿ (ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು) ಅಕ್ಟೋಬರ್ 2ರವರೆಗೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತದಲ್ಲಿರುವ ಕೋಟ್ಯಂತರ ತಾಯಂದಿರು ಮತ್ತು ಸಹೋದರಿಯರು ನನ್ನನ್ನು ಆಶೀರ್ವದಿಸುತ್ತಿದ್ದಾರೆ. ಧಾರ್ನಲ್ಲಿರುವ ದೇಶದ ಅತಿದೊಡ್ಡ ಸಮಗ್ರ ಜವಳಿ ಉದ್ಯಾನವನವು ಉದ್ಯಮಕ್ಕೆ ಹೊಸ ಶಕ್ತಿಯನ್ನು ಒದಗಿಸುತ್ತದೆ ಮತ್ತು ರೈತರ ಉತ್ಪನ್ನಗಳಿಗೆ ನ್ಯಾಯಯುತ ಮೌಲ್ಯವನ್ನು ನೀಡುತ್ತದೆ. 1948 ರ ಈ ದಿನದಂದು, ನಮ ಸೇನೆಯು ಹೈದರಾಬಾದ್ ಅನ್ನು ಸ್ವತಂತ್ರಗೊಳಿಸಿ ಭಾರತದ ಹೆಮೆಯನ್ನು ಪುನಃಸ್ಥಾಪಿಸಿದಾಗ ಸರ್ದಾರ್ ಪಟೇಲ್ ಅವರ ದೃಢವಾದ ಇಚ್ಛಾಶಕ್ತಿ ಕಂಡುಬಂದಿತು ಎಂದು ಹೈದರಾಬಾದ್ ವಿಮೋಚನಾ ದಿನವನ್ನು ಉಲ್ಲೇಖಿಸುತ್ತಾ ಅವರು ಹೇಳಿದರು.