ನೂತನ ಸಂಸತ್ ಭವನಕ್ಕೆ ‘ಅನುಭವ ಮಂಟಪ’ ಎಂದು ಹೆಸರಿಡುವಂತೆ ಒತ್ತಾಯ

Social Share

ಬೆಂಗಳೂರು, ಆ. 7- ನವದೆಹಲಿಯ ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂಬ ಹೆಸರನ್ನು ನಾಮಕರಣ ಮಾಡಿ ಜಗತ್ತಿಗೆ ಪ್ರಪ್ರಥಮ ಪ್ರಜಾಪ್ರಭುತ್ವ ಸಂಸತ್ತಿನ ಕಲ್ಪನೆ ಮಾಡಿಕೊಟ್ಟಿದ್ದು ಭಾರತ ಎಂದು ತಿಳಿಯುವಂತೆ ಮಾಡಬೇಕೆಂದು
ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯು ಕೇಂದ್ರ ಸರ್ಕಾರಕ್ಕೆ ಆಗ್ರಹಪೂರ್ವಕ ಮನವಿ ಮಾಡಿದೆ.

ಅನುಭವ ಮಂಟಪದ ಮುಖಾಂತರ ಬಸವಾದಿ ಶರಣರು 12ನೇ ಶತಮಾನದಲ್ಲಿ ಬಸವಕಲ್ಯಾಣದಲ್ಲಿ ವಿಶ್ವದ ಪ್ರಪ್ರಥಮ ಸಂಸತ್ತನ್ನು ಪ್ರಾರಂಭಿಸಿ ವಿಶ್ವಕ್ಕೆ ಪ್ರಜಾಪ್ರಭುತ್ವದ ಸಂಸತ್ತಿನ ಕಲ್ಪನೆ ಕೊಟ್ಟ ದೇಶ ಭಾರತ. ಕರ್ನಾಟಕ ರಾಜ್ಯ ಸರ್ಕಾರವು ಈ ಬಗ್ಗೆ ಒಂದು ನಿರ್ಣಯ ಕೈಗೊಂಡು ಸಂಘಟನೆಯ ಬೇಡಿಕೆಗೆ ಒತ್ತಾಸೆಯಾಗಿ ನಿಲ್ಲುವುದರ ಜತೆಗೆ ಕೇಂದ್ರಕ್ಕೆ ಈ ಬಗ್ಗೆ ಶಿಫಾರಸ್ಸು ಮಾಡುವಂತೆ ಜನಪರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ ಕಂಕಣವಾಡಿ ಒತ್ತಾಯಿಸಿದ್ದಾರೆ.

ಪ್ರಜಾಪ್ರಭುತ್ವದ ಹುಟ್ಟು ಮತ್ತು ಸಂಸತ್ತು ಸ್ಥಾಪಿಸಿದ್ದು ಭಾರತದ ಬಸವಕಲ್ಯಾಣದಲ್ಲಿ ಎಂಬ ಮಹತ್ವದ ವಿಷಯವನ್ನು ಪ್ರಚಾರಪಡಿಸಿ ಇಡೀ ವಿಶ್ವದ ಗಮನ ಭಾರತದತ್ತ ಕೇಂದ್ರೀಕರಿಸುವಂತೆ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಪ್ರಶಂಶಿಸಿ ಹರ್ಷ ವ್ಯಕ್ತಪಡಿಸಿದೆ.

ಇದು ಕೇವಲ ಸಂಘಟನೆಯ ಕನಸು ಮಾತ್ರವಲ್ಲ, ಇಡೀ ಭಾರತ ದೇಶದ ಪ್ರತಿಯೊಬ್ಬರ ಆಸೆಯಾಗಿದ್ದು, ತಕ್ಷಣವೇ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಜನತೆಗೆ ಸಂತೋಷದ ವಿಷಯ ಕೊಡಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Articles You Might Like

Share This Article