ಬೆಂಗಳೂರು,ಡಿ.4- ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ವಿಕಲಚೇತನರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲಾಗುತ್ತಿದೆ. ಪಟ್ಟಿಯಲ್ಲಿ ನೋಂದಣಿಯಾಗದ ಅರ್ಹ ವಿಕಲಚೇತನರು ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 8 ರವರೆಗೆ ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತದಾರರ ಪಟ್ಟಿ ಪರಿಷ್ಕರಣೆ ವೀಕ್ಷಕರಾದ ಬಿ.ಆರ್.ಮಮತಾ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ-2022ರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗುಜರಾತ್ ಚುನಾವಣೆ : ನಾಳೆ 2ನೇ ಹಂತದ ಮತದಾನ
ಹೊಸ ಮತದಾರರನ್ನು ನೋಂದಣಿ ಮಾಡಲು ಕಾಲೇಜು ಮಟ್ಟದಲ್ಲಿ ಈಗಾಗಲೇ ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲೆಯ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದೆ. 18 ವರ್ಷ ಪೂರ್ಣಗೊಂಡ ನವ ಮತದಾರರು ಹಾಗೂ ಅರ್ಹ ಸಾರ್ವಜನಿಕರನ್ನು ನೋಂದಣಿ ಮಾಡಿಸಲು ಗ್ರಾಮ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಮಟ್ಟದಲ್ಲಿರುವ ಎಲ್ಲಾ ಗ್ರಾಮೀಣ,ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಶ್ರಮವಹಿಸಿ ನೋಂದಾಯಿಸಲು ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದರು.
ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಶೋಭಯಾತ್ರೆಗೆ ಪೊಲೀಸರ ಬಿಗಿ ಬಂದೋಬಸ್ತ್
ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ತೇಜಸ್‍ಕುಮಾರ್, ಜಿಲ್ಲಾ ಪಂಚಾಯತ್‍ನ ಮುಖ್ಯ ಲೆಕ್ಕಾಧಿಕಾರಿ ಗಂಗಾಧರ್ ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ್ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ್.ಎನ್.ಎಂ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
#VoterRegistration, #AssemblyElection, #NewVoters, #ElectionCommission,