Friday, January 3, 2025
Homeರಾಷ್ಟ್ರೀಯ | Nationalಹೊಸ ವರ್ಷಾಚರಣೆ : ತಡರಾತ್ರಿ 2 ಗಂಟೆಯವರೆಗೆ ಬಿಎಂಟಿಸಿ ಬಸ್‌‍ ಸೇವೆ

ಹೊಸ ವರ್ಷಾಚರಣೆ : ತಡರಾತ್ರಿ 2 ಗಂಟೆಯವರೆಗೆ ಬಿಎಂಟಿಸಿ ಬಸ್‌‍ ಸೇವೆ

New Year Celebrations: BMTC Bus Service Until 2 AM

ಬೆಂಗಳೂರು, ಡಿ.31-ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯವನ್ನು ತಡ ರಾತ್ರಿವರೆಗೆ ಇಂದು ಒದಗಿಸಲಿದೆ.

ಇಂದು ರಾತ್ರಿ 11ಗಂಟೆಯ ನಂತರ ತಡರಾತ್ರಿ 2 ಗಂಟೆಯವರೆಗೆ ಪ್ರಯಾಣಿಕರ ಸಂಚಾರದ ಒತ್ತಡಕ್ಕನುಗುಣವಾಗಿ ಕೆಳಕಂಡ ಮಾರ್ಗಗಳಲ್ಲಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ವಹಿಸಲಾಗಿದೆ ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ.

ಬ್ರಿಗೇಡ್‌ ರಸ್ತೆಯಿಂದ ಎಲೆಕ್ಟ್ರಾನಿಕ್‌್ಸಸಿಟಿ,ಜಿಗಣಿ ವರೆಗೆ ಹಾಗೂ ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದಿಂದ ಸರ್ಜಾಪುರ, ಕೆಂಗೇರಿ ಕೆ.ಹೆಚ್‌.ಬಿ. ಕ್ವಾಟ್ರಸ್‌‍, ಜನಪ್ರಿಯ ಟೌನ್‌ ಶಿಪ್‌, ನೆಲಮಂಗಲ, ಯಲಹಂಕ ಉಪನಗರ 5ನೇ ಹಂತ, ಯಲಹಂಕ, ಬಾಗಲೂರು, ಹೊಸಕೋಟೆ, ಚನ್ನಸಂದ್ರ, ಕಾಡುಗೋಡಿ, ಬನಶಂಕರಿ ವರೆಗೆ ಬಸ್‌‍ ಸೌಲಭ್ಯ ಕಲ್ಪಿಸಲಿದೆ.

ಅಲ್ಲದೆ, ಜನದಟ್ಟಣೆ ಇರುವ ಪ್ರಮುಖ ಬಸ್‌‍ ನಿಲ್ದಾಣ/ಜಂಕ್ಷನ್‌ಗಳಾದ ಕೆಂಪೇಗೌಡ ಬಸ್‌‍ ನಿಲ್ದಾಣ, ಕೃ.ರಾ.ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಬನಶಂಕರಿ, ಹೆಬ್ಬಾಳ ಮತ್ತು ಸೆಂಟ್ರಲ್‌ ಸಿಲ್‌್ಕಬೋರ್ಡ್‌ಗಳಿಂದ ಪ್ರಯಾಣಿಕರ ದಟ್ಟಣೆ/ಬೇಡಿಕೆಗನುಗುಣವಾಗಿ ಸಾರಿಗೆ ಸೌಲಭ್ಯವನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

RELATED ARTICLES

Latest News