Wednesday, October 16, 2024
Homeಬೆಂಗಳೂರುಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ : ತುಷಾರ್ ಗಿರಿನಾಥ್

ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ : ತುಷಾರ್ ಗಿರಿನಾಥ್

ಬೆಂಗಳೂರು, ಡಿ.20- ರಾಜ್ಯದಲ್ಲಿ ಮತ್ತೆ ಕೊರೊನಾ ಕಾರ್ಮೋಡ ಆವರಿಸಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಪ್ರಕರಣ ಇದುವರೆಗೂ ಪತ್ತೆಯಾಗಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಸದ್ಯಕ್ಕೆ ವರ್ಷಾಚರಣಗೆ ಯಾವುದೆ ನಿರ್ಬಂಧ ವಿಧಿಸಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯ ಪಿಹೆಚ್‍ಸಿ ನಮ್ಮ ಕ್ಲಿನಿಕ್ ಸಿದ್ಧತೆ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಕೇಳಿದ್ದು, ಈ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಂಬಂಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರ್ಯಾಂಡಮ್ ಮತ್ತು ಆರ್‍ಟಿಸಿಪಿಆರ್ ಪರೀಕ್ಷೆ ಅಗತ್ಯವಿದ್ದರೆ ಸಿದ್ಧತೆ ಮಾಡಿಕೊಳ್ಳಿ ಎಂದು ತಿಳಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯ ಎಸ್‍ಎಆರ್‍ಐ ಮತ್ತು ಐಎಲ್‍ಐ ಕೇಸ್ ಮೇಲೆ ನಿಗಾ ವಹಿಸಲು ಪಾಲಿಕೆ ಮುಂದಾಗಿದ್ದು, ಆರೋಗ್ಯಾಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಲಾಗಿದೆ.

ನಟಿ ರಶ್ಮಿಕಾ ಡೀಪ್ ಫೇಕ್ ವಿಡಿಯೋ ಮಾಡಿದ ನಾಲ್ವರನ್ನು ಪತ್ತೆ ಹಚ್ಚಿದ ಪೋಲೀಸರು

ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಕೋವಿಡ್ ಪ್ರಕರಣಗಳು ಪತ್ತೆಯಾಗಿಲ್ಲ. ವರ್ಷಾಷರಣೆಗೆ ಯಾವುದೇ ಪ್ರತ್ಯೇಕ ಗೈಡ್‍ಲೈನ್ಸ್ ವಿಧಿಸಿಲ್ಲ. ಆದರೂ ಜನರು ಕ್ರಮಗಳನ್ನು ಪಾಲಿಸಬೇಕಾಗಿರುವುದು ಅನಿವಾರ್ಯವಾಗಿದೆ. ಜನಸಂದಣಿ ಇರುವ ಕಡೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಜ್ವರ, ಕೆಮ್ಮು, ನೆಗಡಿ ಕಂಡು ಬಂದರೆ ಕೂಡಲೇ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.

RELATED ARTICLES

Latest News