ಸಿಎಂ ರೇಸ್‍ನಲ್ಲಿ ಸಿ.ಟಿ.ರವಿ ಮುಂದು..!

ಬೆಂಗಳೂರು, ಜು.26- ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರನ್ನು ಬೆಂಗಳೂರಿನಲ್ಲೇ ಇರುವಂತೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ರೇಸ್‍ನಲ್ಲಿ ಹಲವಾರು ಮಂದಿ ಹೆಸರು ಕೇಳಿ ಬಂದಿದ್ದು, ಸಿ.ಟಿ.ರವಿ ಅವರ ಹೆಸರು ಕೂಡ ಮುಂಚೂಣಿಯಲ್ಲಿದೆ. ಈ ಹಿಂದೆ ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡಿರುವ ಅವರು ಹೈಕಮಾಂಡ್ ಆದೇಶದ ಮೇರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷ ಸಂಘಟನೆಯ ಜವಾಬ್ದಾರಿ ವಹಿಸಿಕೊಂಡಿದ್ದರು.