Friday, November 22, 2024
Homeರಾಷ್ಟ್ರೀಯ | Nationalಮಣಿಪುರದಲ್ಲಿ ಭಯೋತ್ಪಾದನೆ ಹರಡಲು ಯತ್ನಿಸಿದ ಆರೋಪಿಯನ್ನು ಬಂಧಿಸಿದ ಎನ್‌‍ಐಎ

ಮಣಿಪುರದಲ್ಲಿ ಭಯೋತ್ಪಾದನೆ ಹರಡಲು ಯತ್ನಿಸಿದ ಆರೋಪಿಯನ್ನು ಬಂಧಿಸಿದ ಎನ್‌‍ಐಎ

ಇಂಫಾಲ್‌‍,ಜೂ.7-ಮಣಿಪುರದ ಹಿಂಸಾಚಾರ ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ಭಯೋತ್ಪಾದನೆ ಹರಡಲು ಯತ್ನಿಸಿದ ಆರೋಪದ ಮೇಲೆ ಪ್ರಮುಖ ಆರೋಪಿಯನ್ನು ಎನ್‌‍ಐಎ ಇಂಫಾಲ್‌ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನು ಕುಕಿ ನ್ಯಾಷನಲ್‌ ಫ್ರಂಟ್‌‍-ಮಿಲಿಟರಿ ಕೌನ್ಸಿಲ್‌ (ಕೆಎನ್‌‍ಎಫ್‌‍-ಎಂಸಿ) ಸದಸ್ಯ ಥೋಂಗ್‌‍ಮಿಂಥಾಂಗ್‌ ಹಾಕಿಪ್‌ ಅಲಿಯಾಸ್‌‍ ರೋಜರ್‌ ಎಂದು ಗುರುತಿಸಲಾಗಿದೆ.

ಆರೋಪಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿದೆ. ಅಲ್ಲದೇ ಆತನ ವಿರುದ್ಧ ಕಳೆದ ವರ್ಷ ಜುಲೈ 19ರಂದು ಎನ್‌ಐಎ ಸುಮೋಟೋ ಪ್ರಕರಣ ದಾಖಲಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮ್ಯಾನಾರ್‌ ಮೂಲದ ಭಯೋತ್ಪಾದಕ ಸಂಘಟನೆಗಳ ಬೆಂಬಲದೊಂದಿಗೆ ಕುಕಿ ಮತ್ತು ಝೋಮಿ ದಂಗೆಕೋರರನ್ನು ಸರ್ಕಾರದ ವಿರುದ್ಧ ತಿರುಗಿ ಬೀಳುವಂತೆ ಮಾಡುವ ಸಂಚು ರೂಪಿಸಿದ್ದರು. ಈ ಪ್ರದೇಶದಲ್ಲಿನ ಪ್ರಸ್ತುತ ಜನಾಂಗೀಯ ಅಶಾಂತಿಯನ್ನು ಬಳಸಿಕೊಂಡು ಈ ಕೃತ್ಯ ಎಸಗಲು ಮುಂದಾಗಿದ್ದರು. ಅಲ್ಲದೇ ಬಂಧಿತ ಆರೋಪಿ ಹಿಂಸಾಚಾರದ ಸಮಯದಲ್ಲಿ ವಿವಿಧ ಸ್ಥಳಗಳಲ್ಲಿ ಭದ್ರತಾ ಪಡೆಗಳ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ.

ಈತ ಮಣಿಪುರ ರಾಜ್ಯದಲ್ಲಿನ ಅಸ್ಥಿರ ಪರಿಸ್ಥಿತಿಯನ್ನು ಉಲ್ಬಣಗೊಳಿಸಲು ಮತ್ತು ಜನರ ಮನಸ್ಸಿನಲ್ಲಿ ಭಯ ಹುಟ್ಟುಹಾಕಲು ಆರೋಪಿ ಮ್ಯಾನರ್‌ನ ಕುಕಿ ನ್ಯಾಷನಲ್‌ ಫ್ರಂಟ್‌‍-ಬರ್ಮಾ (ಕೆಎನ್‌‍ಎಫ್‌‍-ಬಿ) ದಂಗೆಕೋರ ಗುಂಪಿನೊಂದಿಗೆ ಸಂಪರ್ಕದಲ್ಲಿದ್ದ.

ಹಿಂಸಾಚಾರದಲ್ಲಿ ಬಳಸಲು ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ಪೂರೈಸಲು ಆರೋಪಿಗಳು ಕೆಎನ್‌‍ಎಫ್‌‍-ಬಿ ನಾಯಕರನ್ನು ಭೇಟಿಯಾಗಿದ್ದ ಎಂದು ಎನ್‌‍ಐಎ ತನಿಖೆ ವೇಳೆ ತಿಳಿದುಬಂದಿದೆ. ಆರೋಪಿ ಭದ್ರತಾ ಪಡೆಗಳ ವಿರುದ್ಧ ಹಲವಾರು ಸಶಸ್ತ್ರ ದಾಳಿಗಳಲ್ಲಿ ಭಾಗವಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

Latest News