ಮೋಸ್ಟ್ ವಾಂಟೆಡ್ ಭಯೋತ್ಪಾದಕ ಹರ್ಪ್ರೀತ್ ಸಿಂಗ್ ಅರೆಸ್ಟ್

Social Share

ನವದೆಹಲಿ,ಡಿ.2- ಲೂಯಾನ ಕೋರ್ಟ್ ಬಾಂಬ್ ಸ್ಪೋಟದ ರೂವಾರಿ ಹಾಗೂ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಹರ್‍ಪ್ರೀತ್ ಸಿಂಗ್‍ನನ್ನು ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ತಿಳಿಸಿದೆ. ಕೌಲಾಲಂಪುರದಿಂದ ವಿಮಾನದಲ್ಲಿ ಬಂದಿಳಿದ ಭಯೋತ್ಪಾದಕನನ್ನು ಇಂದು ಬೆಳಿಗ್ಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಎನ್‍ಐಎ ವಕ್ತಾರರು ತಿಳಿಸಿದ್ದಾರೆ.

ಹರ್‍ಪ್ರೀತ್ ಸಿಂಗ್ ಅಲಿಯಾಸ್ ಹ್ಯಾಪಿ ಮಲೇಷ್ಯಾ ಎಂದೇ ಕರೆಯಲಾಗುತ್ತಿದ್ದ ಅಮೃತ್‍ಸರ ಮೂಲದ ಸಿಂಗ್ ಬಗ್ಗೆ ಸುಳಿವು ನೀಡುವವರಿಗೆ 10 ಲಕ್ಷ ರೂ.ಗಳ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು. ಕಳೆದ ವರ್ಷ ಡಿಸೆಂಬರ್‍ನಲ್ಲಿ ಲೂಯಾನ ಕೋರ್ಟ್ ಕಟ್ಟಡದಲ್ಲಿ ನಡೆದ ಬೃಹತ್ ಬಾಂಬ್ ಸ್ಪೋಟದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿ ಆರು ಮಂದಿ ಗಾಯಗೊಂಡಿದ್ದ ಪ್ರಕರಣದಲ್ಲಿ ಅವರನ್ನು ಬಂಸಲಾಗಿದೆ.

ಯುಪಿ ಡಿಸಿಎಂಗಳಿಗೆ ಬಂಪರ್ ಆಫರ್ ನೀಡಿದ ಅಖಿಲೇಶ್ ಯಾದವ್

ಪಾಕಿಸ್ತಾನ ಮೂಲದ ಸ್ವಯಂ-ಘೋಷಿತ ಇಂಟರ್‍ನ್ಯಾಷನಲ್ ಸಿಖ್ ಯೂತ್ ಫೆಡರೇಶನ್ (ಐಎಸ್‍ವೈಎಫ್) ಮುಖ್ಯಸ್ಥ ಲಖ್ಬೀರ್ ಸಿಂಗ್ ರೋಡ್ ಅವರ ಸಹವರ್ತಿಯಾಗಿದ್ದ ಸಿಂಗ್, ಲೂಯಾನ ಕೋರ್ಟ್ ಕಟ್ಟಡ ಸ್ಪೋಟದ ಸಂಚುಕೋರರಲ್ಲಿ ಒಬ್ಬರಾಗಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಗಾಯಕ ಸಿಧು ಮೂಸೆವಾಲಾ ಹಂತಕ ಗೋಲ್ಡಿ ಅಮೆರಿಕಾದಲ್ಲಿ ಸೆರೆ..!

ಬಂಧಿತ ಆರೋಪಿಯು ಸ್ಪೋಟಕಗಳು, ಶಸ್ತ್ರಾಸ್ತ್ರಗಳು ಮತ್ತು ಮಾದಕವಸ್ತುಗಳ ಕಳ್ಳಸಾಗಣೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿದ್ದು, ಅವರು ದೇಶದ ಹಲವಾರು ನಗರಗಳ ಪೊಲೀಸರಿಗೆ ಬೇಕಾದ ವ್ಯಕ್ತಿಯಾಗಿದ್ದರು ಎಂದು ಅವರು ವಿವರಣೆ ನೀಡಿದ್ದಾರೆ.

NIA, arrests, Ludhiana, court, blast, conspirator, Harpreet Singh,

Articles You Might Like

Share This Article